Sunday, September 8, 2024

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಕೋಟಾ ಶ್ರೀನಿವಾಸ ಪೂಜಾರಿಗೆ ಬಿಜೆಪಿ ಮಣೆ !? | ಹಾಲಿ ಸಂಸದೆಗೆ ಕೋಕ್‌ !  

ಜನಪ್ರತಿನಿಧಿ (ಬೆಂಗಳೂರು) : ಲೋಕಸಭಾ ಚುನಾವಣೆಯ ಸನಿಹವಾಗುತ್ತಿದ್ದಂತೆ ಅಭ್ಯರ್ಥಿ ಆಯ್ಕೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಮತ್ತೊಂದು ಕುತೂಹಲಕರವಾದ ತಿರುವು ಕಂಡಿದೆ.

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಉಭಯ ಜಿಲ್ಲೆಗಳಲ್ಲಿ ಸ್ವತಃ ಕಾರ್ಯಕರ್ತರೇ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಗೋ ಬ್ಯಾಕ್‌  ಶೋಭಾ ಅಭಿಯಾನವೂ ಕೇಳಿ ಬಂದಿತ್ತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸತತ ಎರಡು ಭಾರಿ ಆಯ್ಕೆಗೊಂಡಿದ್ದ ಶೋಭಾ ಕರಂದ್ಲಾಜೆ ಈ ಭಾರಿಯೂ ಇಲ್ಲಿಂದಲೇ ಕಣಕ್ಕಿಳಿಯುವುದಕ್ಕೆ ಎಲ್ಲಾ ಹಂತದ ತಯಾರಿ ಮಾಡಿಕೊಂಡಿದ್ದರು. ಈಗ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಬಿಜೆಪಿ ಹೈಕಮಾಂಡ್‌ ಮಟ್ಟದಲ್ಲಿ ಉಂಟಾದ ಈ ಬೆಳವಣಿಗೆ ಸ್ವತಃ ಶೋಭಾ ಅವರಿಗೂ ಅಚ್ಚರಿ ಮೂಡಿಸಿದೆ.

ಶೋಭಾ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವುದರ ಬಗ್ಗೆ ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ ಎಂಬ ಮಾಹಿತಿ ಈಗ ಹೊರಬಂದಿದ್ದು, ಶೋಭಾ ಅವರ ವಿರುದ್ಧ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೇಳಿಬಂದ ಭಾರಿ ದೊಡ್ಡ ಮಟ್ಟದ ವಿರೋಧವೇ ಹೈಕಮಾಂಡ್‌ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಮುಖ್ಯ ಕಾರಣ ಎಂದು ಬಿಜೆಪಿಯ ಹೈಕಮಾಂಡ್‌ನ ಬಲ್ಲಮೂಲಗಳು ಸುದ್ದಿ ಸಂಸ್ಥೆಗಳಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಬಿಜೆಪಿ ನಾಯಕ ಸಿ.ಟಿ ರವಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್‌ಗಾಗಿ ಕಸರತ್ತು ನಡೆಸಿದ್ದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕೋಟಾ ಶ್ರೀನಿವಾಸ ಪೂಜಾರಿಗೆ ಬಿಜೆಪಿ ಟಿಕೇಟ್‌ ?

ಪ್ರಮೋದ್‌ ಮಧ್ವರಾಜ್‌, ಸಿ.ಟಿ ರವಿ ಸೇರಿ ಎಲ್ಲಾ ಆಕಾಂಕ್ಷಿಗಳ ಹೆಸರುಗಳನ್ನು ಬದಿಗೊತ್ತಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್‌ ಅಚ್ಚರಿಯ ಆಯ್ಕೆ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಇಲ್ಲಿಂದ ಬಿಜೆಪಿ ಟಿಕೇಟ್‌ ನೀಡಲಿದೆ ಎಂದು ಹೇಳಲಾಗುತ್ತಿದೆ. ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ ನೀಡಿ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ- ಚಿಕ್ಕಮಗಳೂರಿನಲ್ಲಿ ಕಣಕ್ಕಿಳಿಸಬಹುದು ಎಂಬ ಮಾಹಿತಿ ಈಗ ಲಭ್ಯವಾಗುತ್ತಿರುವುದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಣ ಮತ್ತಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ. ಬಿಲ್ಲವ ಮತಗಳನ್ನು ಸೆಳೆಯುವ ತಂತ್ರಗಾರಿಯೂ ಹೈಕಮಾಂಡ್ ನ ಈ ಯೋಚನೆಯ ಹಿಂದಿದೆ ಎಂದು ಹೇಳಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!