Thursday, October 31, 2024

ಬೈಂದೂರು ಮಾಜಿ ಶಾಸಕ ಸುಕುಮಾರ್‌ ಶೆಟ್ಟಿ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ !

ಜನಪ್ರತಿನಿಧಿ (ಬೆಂಗಳೂರು) : ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಇಂದು(ಮಂಗಳವಾರ, ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಗಿದ್ದಾರೆ. ಕಾಂಗ್ರೆಸ್‌ ಮುಖಂಡರೊಂದಿಗೆ ಅವರು ನಿನ್ನೆ(ಸೋಮವಾರ) ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದರು.

ಅವರು, ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೈಂದೂರಿನ ಮಾಜಿ ಶಾಸಕ ಬಿ.ಎಮ್‌ ಸುಕುಮಾರ್‌ ಶೆಟ್ಟಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆದ ಡಿ. ಕೆ ಶಿವಕುಮಾರ್‌ ಅವರು ಬಿ.ಎಂ ಸುಕುಮಾರ್‌ ಶೆಟ್ಟಿ ಅವರನ್ನು ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿ ಮಾಡಿದ್ದ ಅವರು, “ಕಾಂಗ್ರೆಸ್‌ನ ಪ್ರಮುಖ ನಾಯಕರುಗಳನ್ನು ನಿನ್ನೆ(ಸೋಮವಾರ) ಭೇಟಿಯಾಗಿ ಮಾತನಾಡಿದ್ದು, ಮಂಗಳವಾರ ಕಾಂಗ್ರೆಸ್ ಸೇರುತ್ತಿದ್ದೇನೆ. ನಾನು ಕಾಂಗ್ರೆಸ್‌ ಎದುರು ಯಾವುದೇ ಬೇಡಿಕೆಯಿಟ್ಟಿಲ್ಲ” ಎಂದು ತಿಳಿಸಿದ್ದರು.

ಈ ಹಿಂದೆ 2019ರ ಅವಧಿಯಲ್ಲಿ ಸುಕುಮಾರ ಶೆಟ್ಟಿ ಬೈಂದೂರಿನಲ್ಲಿ ಬಿಜೆಪಿ ಶಾಸಕರಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಆಗಿನಿಂದಲೂ ಸುಕುಮಾರ ಶೆಟ್ಟಿ ಬಿಜೆಪಿಯಲ್ಲಿ ಸಕ್ರಿಯವಾಗಿರಲಿಲ್ಲ. ಕಾಂಗ್ರೆಸ್‌ನತ್ತ ಅವರು ಮುಖ ಮಾಡಿದ್ದರು ಎಂಬ ವದಂತಿ ಜೋರಾಗಿದ್ದಿತ್ತು. ಇತ್ತೀಚೆಗಂತೂ ಆ ವದಂತಿ ಜಾಸ್ತಿ ಕೇಳಿ ಬಂದಿತ್ತು.

ಈ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವು ಸಚಿವರುಗಳನ್ನು ಕೂಡಾ ಅವರು ಭೇಟಿಯಾಗಿದ್ದರು. ಇದರಿಂದಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮಾತು ಕೇಳಿಬಂದಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!