spot_img
Friday, March 27, 2026
spot_img

ಸಿಎಎ ಜಾರಿ ಮಾಡುವ ಮುಖೇನ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ರಾಜಕೀಯ ಧ್ರುವೀಕರಣದ ದುರುದ್ದೇಶ ಮೆರೆದಿದೆ : ಜೈರಾಮ್‌ ರಮೇಶ್‌ ಆರೋಪ

ಜನಪ್ರತಿನಿಧಿ (ನವ ದೆಹಲಿ) : ಲೋಕಸಭಾ ಚುನಾವಣೆ ಸನಿಹವಾಗುತ್ತಿದಂತೆ ಸಿಎಎ ಜಾರಿ ಮಾಡುವ ಮುಖೇನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಧ್ರುವೀಕರಣದ ದುರುದ್ದೇಶ ಮೆರೆದಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಟೀಕೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಗೆ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಯುವಕರು, ರೈತರು, ಮಹಿಳೆಯರು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಮುಂದಾಗುತ್ತಿದ್ದೇವೆ. ನರೇಂದ್ರ ಮೋದಿ ಅವರ ಬಳಿಯಲ್ಲಿ ಯಾವ ವಿಷಯವಿದೆ ? ಬಿಜೆಪಿ ಬಳಿ ಯಾವ ವಿಷಯವಿದೆ ? ಹತ್ತು ವರ್ಷಗಳಲ್ಲಿ ದೇಶಕ್ಕೆ ಆದ ಅನ್ಯಾಯದ ಬಗ್ಗೆ ಮೋದಿ ಯಾಕೆ ಮಾತನಾಡುತ್ತಿಲ್ಲ ? ಸಿಎಎ ಜಾರಿ ಮಾಡಲು ನಾಲ್ಕು ವರ್ಷ ಮೂರು ತಿಂಗಳುಗಳು ಬೇಕಾಯಿತೆ ? ಲೋಕಸಭಾ ಚುನಾವಣೆಗೆ ಒಂದು ತಿಂಗಳು ಇರುವಾಗ ಜನರಿಗೆ ಧ್ರುವೀಕರಣದ ಡೋಸ್‌ ನೀಡುತ್ತಿದ್ದಾರೆ ಎಂದು ಜೈರಾಮ್‌ ರಮೇಶ್ ಕಟುವಾಗಿ ಟೀಕಿಸಿದ್ದಾರೆ.

ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಸಿಎಎ ಜಾರಿ ಮಾಡುವುದಿಲ್ಲ ಎಂದು ಹೇಳಿವೆ. ಧರ್ಮದ ಆಧಾರದ ಮೇಲೆ ಪೊಔರತ್ವ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಹಾಗಾಗಿ ನಾವು ಸಹ ಸಿಎಎ ಅನ್ನು ವಿರೋಧಿಸುತ್ತೇವೆ ಎಂದು ಅವರು ಆರೋಪಿಸಿದ್ದಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ದಾವೆ ಹೂಡಲಾಗಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!