spot_img
Wednesday, January 22, 2025
spot_img

ಸಿಎಎ ಜಾರಿ ಬಿಜೆಪಿಯ ನೀಚ ಮತ ಬ್ಯಾಂಕ್ ರಾಜಕಾರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಕ್ರೋಶ

ಜನಪ್ರತಿನಿಧಿ (ನವ ದೆಹಲಿ) : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ʼಪೌರತ್ವ ತಿದ್ದುಪಡಿ ಕಾಯ್ದೆʼ ಜಾರಿ ಮಾಡಿರುವುದು ಬಿಜೆಪಿಯ ನೀಚ ವೋಟ್‌ ಬ್ಯಾಂಕ್‌ ರಾಜಕಾರಣವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.

ಪಾಕಿಸ್ತಾನ, ಅಫ್ಗಾನಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ ೩.೫ ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಬಡ ವಲಸಿಗರಿಗೆ ಇಲ್ಲಿ ಮನೆ, ಉದ್ಯೋಗ ನೀಡುವ ಮೂಲಕ ನಮ್ಮ ಜನರ ಹಣವನ್ನು ವ್ಯಯಿಸಲು ಬಯಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ದೇಶದ ಜನರು ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕೆಂದು ಬಯಸುತ್ತಿದ್ದಾರೆ. ನೆರೆಯ ದೇಶಗಳ ಅಲ್ಪಸಂಖ್ಯಾತರು ದೇಶದಲ್ಲಿ ನೆಲೆಸಿರುವುದರ ಮುಖೇನ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಲಿದೆ. ಸಿಎಎ ಜಾರಿ ಬಿಜೆಪಿಯ ನೀಚ ಮತ ಬ್ಯಾಂಕ್‌ ರಾಜಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಕಾನೂನನ್ನು ಹಿಂಪಡೆಯದಿದ್ದರೇ ದೇಶದ ಜನರು ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಜ್ರಿವಾಲ್‌ ಮನವಿ ಮಾಡಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!