spot_img
Friday, March 27, 2026
spot_img

ಸಿಎಎ ಜಾರಿ : ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಅದಕ್ಕಾಗಿ ಈ ಗಿಮಿಕ್ಸ್‌ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಉಡುಪಿ) : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಜಾರಿ ಮಾಡಿದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ವರದಿಗಾರರು ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು, ನಿನ್ನೆ ಬೆಂಗಳೂರಿನ ಕೆಪಿಸಿಸಿ ಸಭಾಂಗಣದಲ್ಲಿ ಮತ್ತೆ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಯಪ್ರಕಾಶ್ ಹೆಗ್ಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!