Wednesday, September 11, 2024

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ | ಸಂವಿಧಾನ ಬದಲಾಯಿಸುವುದೇ ಬಿಜೆಪಿಯ ಹುನ್ನಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಜನಪ್ರತಿನಿಧಿ  (ಉಡುಪಿ) : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ. ಇದು ಬಿಜೆಪಿಯ ಹಿಡನ್‌ ಅಜೆಂಡಾ ಆಗಿದ್ದು, ದೇಶದ ಜನರು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಲಕ್ಷ್ಮೀ ನಾರಾಯಣ ರಾವ್‌ ಕ್ರೀಡಾಂಗಣದಲ್ಲಿ ನಡೆದ ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಎರಡನೇ ಬಾರಿಗೆ ಹೇಳಿಕೆ ನೀಡಿದ್ದಾರೆ. ಸಂವಿಧಾನದ ಬದಲು ಮನುಸ್ಮೃತಿ ಜಾರಿಗೊಳಿಸುವುದೇ ಬಿಜೆಪಿಯ ಹುನ್ನಾರ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಕಾರ್ಮಿಕರು, ಹಿಂದುಳಿದವರು ದೇಶದಲ್ಲಿ ಬದುಕಲು ಸಂವಿಧಾನ ಉಳಿಯಲೇ ಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಐದು ಬಿಜೆಪಿ ಶಾಸಕರು ಗೈರಾಗಿದ್ದರು. ಸತ್ಯ ಕೇಳಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ ಎಂದಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಕಾರ್ಯಕ್ರಮದಲ್ಲಿ ಹಾಜರಾಗದೇ ತಪ್ಪಿಸಿಕೊಂಡಿದ್ದಾರೆ. ನಮ್ಮನ್ನು ನಂಬಿದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಿಮ್ಮ ಆಶೀರ್ವಾದ ನಮಗಿದ್ದರೇ ಸಾಕು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಗ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತನ್ನು ವಿತರಿಸಿದರು.

ಉಡುಪಿ ಜಿಲ್ಲಾಡಳಿತದ ಪರವಾಗಿ ಶ್ರೀಕೃಷ್ಣಮಠದ ರಥವನ್ನು ಹೋಲುವ ಸ್ಮರಣಿಕೆಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ, ವಿಧಾನಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ., ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌ ಸೇರಿ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳ ಸಾಧನೆ :

ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ರೂ. 170 ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಜುಲೈ 2023 ರಿಂದ ಜನವರಿ 2024 ರ ವರೆಗೆ 1,76,323 ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯ ಒಟ್ಟು 7,66,793 ಫಲಾನುಭವಿಗಳಿಗೆ 85.48 ಕೋಟಿ ರೂ. ಗಳನ್ನು ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 2,16,563 ಲಕ್ಷ ನೋಂದಾವಣಿಯಾಗಿ 2,05,763 ಫಲಾನುಭವಿಗಳ ಖಾತೆಗೆ ಪ್ರತೀ ತಿಂಗಳು 2000 ರೂ. ನಂತೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಆಗಸ್ಟ್ ಮಾಹೆಯಿಂದ ಜನವರಿ ಮಾಹೆಯವರೆಗೆ 244.11 ಕೋಟಿ ರೂ. ಸಂದಾಯವಾಗಿ ಶೇ. 97.5 ರಷ್ಟು ಸಾಧನೆಯಾಗಿರುತ್ತದೆ.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 87,63,529 ಮಹಿಳಾ ಪ್ರಯಾಣಿಕರು ಪ್ರಯೋಜನ ಪಡೆದಿದ್ದು, 32.54 ಕೋಟಿ ರೂ. ಗಳನ್ನು ಸರ್ಕಾರದ ವತಿಯಿಂದ ಭರಿಸಲಾಗಿದೆ.
ಜಿಲ್ಲೆಯಲ್ಲಿ 3,67,590 ಗ್ರಾಹಕರಿದ್ದು, 200 ಯೂನಿಟ್‌ಗಿಂತ ಕಡಿಮೆ ಬಳಕೆದಾರರು 3,21,636 ಗ್ರಾಹಕರು ಇದ್ದು, ಗೃಹಜ್ಯೋತಿ ಯೋಜನೆಯಡಿ 3,11,652 ಜನ ನೋಂದಾಯಿಸಿಕೊAಡಿದ್ದು, ಆಗಸ್ಟ್ನಿಂದ ಜನವರಿಯ ವÀರೆಗೆ 114.9 ಕೋಟಿ ರೂ. ಗಳಷ್ಟು ಮೆಸ್ಕಾಂ ಇಲಾಖೆಗೆ ಪಾವತಿ ಮಾಡಲಾಗಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 2341 ಜನ ಅರ್ಹ ಫಲಾನುಭವಿಗಳು ನೋಂದಣಿಯಾಗಿ, 249 ಫಲಾನುಭವಿಗಳಿಗೆ ಪ್ರತೀ ತಿಂಗಳು 3000 ರೂ. ನಂತೆ 14,94,000 ರೂ. ಗಳನ್ನು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!