spot_img
Friday, March 27, 2026
spot_img

ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ | ಕೋಟಾ ಶ್ರೀನಿವಾಸ ಪೂಜಾರಿಗೆ ಉ-ಚಿ ಕ್ಷೇತ್ರದ ಟಿಕೇಟ್‌

ಜನಪ್ರತಿನಿಧಿ (ನವ ದೆಹಲಿ ) : ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇದ್ದು, ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಗಳ ತನ್ನ ಎರಡನೇ  ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ನಿರೀಕ್ಷೆಯಂತೆ ರಾಜ್ಯದ ಕೆಲವು ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್‌ ಕೋಕ್‌ ನೀಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿಯಲ್ಲಿ ಒಂದಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆಯ ಮೇಲೆ ಭಾರಿ ದೊಡ್ಡ ಪ್ರಮಾಣದಲ್ಲಿ ಅಪಸ್ವರ ಕೇಳಿ ಬಂದಿತ್ತು, ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸಿದ್ದರು. ಗೋ ಬ್ಯಾಕ್‌ ಶೋಭಾ ಅಭಿಯಾನವೂ ನಡೆದಿತ್ತು.

ಸದ್ಯ ಹೈಕಮಾಂಡ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನಾಗಿ ರಾಜ್ಯ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೇಟ್‌ ನೀಡಿದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬದಲಿಗೆ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಟಿಕೇಟ್‌ ನೀಡಿದೆ.

ಇನ್ನು ಬಹುಚರ್ಚಿತ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಕೋಕ್‌ ಕೊಟ್ಟು ಯಧುವೀರ್‌ ಕೃಷ್ಣದತ್ತ ಚಾಮರಾಜ್‌ ವಡೇಯರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೇಟ್‌ ನೀಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಕೋಕ್‌ ಕೊಟ್ಟು  ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೇಟ್‌ ನೀಡಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಸದ್ಯ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ ಬಿಡುಗಡೆಗೊಳಿಸಿದೆ.

ಲೋಕಸಭಾ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು :

ಹಾವೇರಿ – ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು ಗ್ರಾಮಾಂತರ-  ಡಾ.ಸಿ.ಎನ್. ಮಂಜುನಾಥ್

ಉಡುಪಿ ಚಿಕ್ಕಮಗಳೂರು- ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕೋಡಿ -ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ – ಹಾಲಿ ಸಂಸದ ಪಿ.ಸಿ.ಗದ್ದಿ ಗೌಡರ್

ವಿಜಯಪುರ- ಹಾಲಿ ಸಂಸದ ರಮೇಶ್ ಜಿಗಜಿಣಗಿ

ಕಲಬುರಗಿ -ಹಾಲಿ ಸಂಸದ ಡಾ.ಉಮೇಶ್ ಜಾಧವ್

ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ

ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ

ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ

ಮೈಸೂರು ಕೊಡಗು -ಯದುವೀರ್

ತುಮಕೂರು- ವಿ.ಸೋಮಣ್ಣ

ದಾವಣಗೆರೆ -ಗಾಯತ್ರಿ (ಹಾಲಿ ಸಂಸದ ಸಿದ್ದೇಶ್ವರ್ ಪತ್ನಿ)

ಬಳ್ಳಾರಿ- ಎಸ್ ಶ್ರೀರಾಮುಲು

ಶಿವಮೊಗ್ಗ- ಬಿ.ವೈ.ರಾಘವೇಂದ್ರ

ಚಾಮರಾಜನಗರ -ಎಸ್ ಬಾಲರಾಜ್

ಕೊಪ್ಪಳ-ಡಾ. ಬಸವರಾಜ್ ಕ್ಯಾವಟೂರ್ (ಹಾಲಿ ಸಂಸದ ಸಂಗಣ್ಣ ಕರಡಿ)

ಧಾರವಾಡ – ಪ್ರಹ್ಲಾದ್ ಜೋಶಿ

ಬೀದರ್ -ಕೇಂದ್ರ ಸಚಿವ ಭಗವಂತ್ ಖೂಬಾ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!