Sunday, September 8, 2024

ಬೆಂಗಳೂರು ಉತ್ತರ ಕ್ಷೇತ್ರದಲ್ಲೂ ಮುಂದುವರಿದ ಗೋ ಬ್ಯಾಕ್‌ ಶೋಭಾ ಅಭಿಯಾನ…

ಜನಪ್ರತಿನಿಧಿ (ಬೆಂಗಳೂರು ) : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲ ಕಳೆದ ಹತ್ತು ವರ್ಷಗಳಿಂದ ಸಂಸದರಾಗಿದ್ದ ಶೋಭ ಕರಂದ್ಲಾಜೆ ಬವಿರುದ್ಧ ಗೋ ಬ್ಯಾಕ್ ಅಭಿಯಾನ ಕೇಳಿಬಂದಿತ್ತು, ಸ್ಥಳೀಯ ಬಿಜೆಪಿ ಕಾರ್ಯಕರ್ತರೇ ಶೋಭಾ ಕರಂದ್ಲಾಜೆ ವಿರುದ್ಧ ‌ ʼಸಂಪರ್ಕಕ್ಕೆ ಸಿಗದ ಸಂಸದೆʼ, ʼಕ್ಷೇತ್ರದ ಪರಿಚಯವಿಲ್ಲದ ಸಂಸದೆʼ ಎಂದೆಲ್ಲಾ ಬಾರಿ ದೊಡ್ಡ ಮಟ್ಟದಲ್ಲಿ ಆಕ್ರೋಶ ಹೊರ ಹಾಕಿದ್ದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಬೇಡವೇ ಬೇಡೆ ಎಂದು ಕಾರ್ಯಕರ್ತರು ಪಟ್ಟು ಬಿದ್ದಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದ ಬಿಜೆಪಿ ಹೈಕಮಾಂಡ್‌ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಕ್‌ ನೀಡಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೇಟ್‌ ನೀಡಿತ್ತು.

ಟಿಕೇಟ್‌ ಘೋಷಣೆಯಾದ ಬೆನ್ನಲ್ಲೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೇಳಿಸಿದ ʼಗೋ ಬ್ಯಾಕ್‌ ಶೋಭಾ ಅಭಿಯಾನʼ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲೂ ಮುಂದುವರಿದಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಅವರಿಗೆ ಟಿಕೇಟ್‌ ನೀಡಿ ಇಲ್ಲಿಂದ ಕಣಕ್ಕಿಳಿಸುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ ಗೋ ಬ್ಯಾಕ್‌ ಅಭಿಯಾನದ ಲಾಭ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹಾಗೂ ಸಿ.ಟಿ ರವಿ ಅವರ ಕನಸಿಗೆ ಬಿಜೆಪಿ ಹೈಕಮಾಂಡ್‌ ತಣ್ಣೀರೆರಚಿ ಮಾಚಿ ಸಚಿವ ಹಾಗೂ ರಾಜ್ಯ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಇಲ್ಲಿಂದ ಟಿಕೇಟ್‌ ನೀಡಿ ರಾಜಕೀಯ ವಲಯ ಅಚ್ಚರಿಗೊಳ್ಳುವಂತೆ ಮಾಡಿದೆ.

ಕಳೆದ ಒಂದು ವರ್ಷದಿಂದಲೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೇಟ್‌ ಶೋಭಾ ಕರಂದ್ಲಾಜೆ ಅವರಿಗೆ ಟಿಕೇಟ್‌ ನೀಡುವುದು ಬೇಡ ಎಂದು ಒತ್ತಾಯಿಸಿದ್ದರು, ಆದಾಗ್ಯೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಕೃಪಾಶೀರ್ವಾದ ಇರುವುದರಿಂದ ತಾನು ಇಲ್ಲಿಂದಲೇ ಕಣಕ್ಕಿಳಿಯುವುದಾಗಿ ಸಿದ್ಧತೆಯಲ್ಲಿ ಅಂತಿಮ ಹಂತದವರೆಗೂ ಶೋಭಾ ಇದ್ದಿದ್ದರೂ, ಆದರೇ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಶೋಭಾ ಕರಂದ್ಲಾಜೆ ಅವರಿಗೆ ಉ-ಚಿ ಲೋಕಸಭಾ ಕ್ಷೇತ್ರದ ಟಿಕೇಟ್‌ ನೀಡದೇ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೋಕ್‌ ಕೊಟ್ಟು ಅಲ್ಲಿ ಕಣಕ್ಕಿಳಿಸುವುದಕ್ಕೆ ಹೈಕಮಾಂಡ್‌ ಟಿಕೇಟ್‌ ನೀಡಿದೆ.

ಇನ್ನು, ಭಾರೀ ವಿರೋಧದ ಮಧ್ಯೆಯೂ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ಗಿಟ್ಟಿಸಿಕೊಂಡಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸದ್ಯ ಅತ್ತ ಖುಷಿಯೂ ಅಲ್ಲದ, ಬೇಸರವೂ ಅಲ್ಲದ ಮೂಡ್‌ನಲ್ಲಿದ್ದಾರೆ.

ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಪಕ್ಷದ ವಿವಿಧ ನಾಯಕರನ್ನು ಭೇಟಿಯಾಗುತ್ತಿರುವ ಶೋಭಾ ಕರಂದ್ಲಾಜೆ ಹಿರಿಯ ನಾಯಕರಿಂದ ಸಲಹೆ ಸೂಚನೆ ಪಡೆಯುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಇಂದು(ಗುರುವಾರ) ಬೆಳಗ್ಗೆ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ ಡಿವಿಎಸ್ ಆಶೀರ್ವಾದ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!