Thursday, October 31, 2024

ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ ಪ್ರಧಾನಿ ನೇತೃತ್ವದ ಸಮಿತಿ !

ಜನಪ್ರತಿನಿಧಿ (ನವದೆಹಲಿ) :  ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ನೇಮಕ ಮಾಡಿದೆ.

ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಇಂದು (ಗುರುವಾರ) ಮಾಹಿತಿ ನೀಡಿದ್ದು, ಸಭೆ ಮುಗಿದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಚೌಧರಿ, ಇಬ್ಬರು ಚುನಾವಣಾ ಅಯುಕ್ತರ ಆಯ್ಕೆಗೆ ಆರು ಹೆಸರುಗಳು ಬಂದಿದ್ದು, ಸಂಧು ಹಾಗೂ ಕುಮಾರ್ ಅವರ ಹೆಸರನ್ನು ಉನ್ನತಾಧಿಕಾರ ಸಮಿತಿಯ ಬಹುಪಾಲು ಸದಸ್ಯರು ಅಂತಿಮಗೊಳಿಸಿದ್ದಾರೆ ಎಂದು ಹೇಳಿದ್ಧಾರೆ.

ಆದಾಗ್ಯೂ, ಭಾರತದ ಮುಖ್ಯ ನ್ಯಾಯಾಧೀಶರು ಆಯ್ಕೆ ಸಮಿತಿಯ ಭಾಗವಾಗಬೇಕಿತ್ತು ಹಾಗೂ ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯ ಮುಂದೆ ಬಂದಿದ್ದಾರೆ ಎಂದು ಹೇಳಲಾದ 200 ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಆರು ಹೆಸರುಗಳನ್ನು ಹೇಗೆ ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಅವರು ಹೇಳಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಶಾರ್ಟ್‌ಲಿಸ್ಟ್ ಮಾಡಿದ ಆರು ಹೆಸರುಗಳಲ್ಲಿ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು, ಸುಧೀರ್ ಕುಮಾರ್ ಗಂಗಾಧರ್ ರಹಾಟೆ ಇದ್ದು ಎಲ್ಲರೂ ಮಾಜಿ ಅಧಿಕಾರಿಗಳಾಗಿದ್ದಾರೆ. ಆರು ಹೆಸರುಗಳ ಪೈಕಿ ಜ್ಞಾನೇಶ್ ಕುಮಾರ್ ಹಾಗೂ ಸುಖಬೀರ್ ಸಿಂಗ್ ಸಂಧು ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಅಂತಿಮಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಆರ್ಟಿಕಲ್ 370 ರದ್ದತಿಯಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳು

ಗೃಹ ಸಚಿವಾಲಯದಲ್ಲಿ ಅವರ ಅಧಿಕಾರಾವಧಿಯಲ್ಲಿ, ಜ್ಞಾನೇಶ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ಕಲ್ಪಿಸುವ 370ನೇ ವಿಧಿಯ ರದ್ದತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿದ್ದರು.

ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿಯಾಗಿದ್ದವು. ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡುವ ಅನಿವಾರ್ಯತೆ ಕೇಂದ್ರ ಸರ್ಕಾರಕ್ಕೆ ಇತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!