spot_img
Friday, March 27, 2026
spot_img

ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ

ಜನಪ್ರತಿನಿಧಿ (ನವ ದೆಹಲಿ) : ಇನ್ಫೋಸಿಸ್ ಮಾಜಿ ಅಧ್ಯಕ್ಷೆ, ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿ ಇಂದು(ಗುರುವಾರ) ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.

ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿದ ಸುಧಾ ಮೂರ್ತಿ :  73 ವರ್ಷದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆಯಾಗಿದ್ದು ಹಲವು ಪುಸ್ತಕಗಳ ಲೇಖಕಿಯಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಓದುಗರ ಪ್ರೀತಿ ಗಳಿಸಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಸಾಮಾಜಿಕ ಕ್ಷೇತ್ರದಲ್ಲೂ ಅವರು ಶ್ರೇಯ ಪಡೆದಿದ್ದಾರೆ.

ಇಂದು ರಾಜ್ಯಸಭೆ ಸದಸ್ಯರಾಗಿ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

ಇನ್ನು, ಸುಧಾಮೂರ್ತಿಯವರು ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಹೆಸರುವಾಸಿಯಾಗಿದ್ದಾರೆ. ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಪದ್ಮಶ್ರೀ (2006) ಮತ್ತು ಪದ್ಮಭೂಷಣ (2023) ಪುರಸ್ಕೃತರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!