Thursday, October 31, 2024

ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷರಾಗಿ ರಾಘವೇಂದ್ರ ಮೊಗವೀರ ನೆಂಪು ಆಯ್ಕೆ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಉಪಾಧ್ಯಕ್ಷರಾಗಿ ರಾಘವೇಂದ್ರ ಮೊಗವೀರ ನೆಂಪು ಆಯ್ಕೆಗೊಂಡಿದ್ದಾರೆ.

ರಾಜಕೀಯ ವ್ಯವಸ್ಥೆಯಲ್ಲಿಯೂ ಗುರುತಿಸಿಕೊಂಡಿರುವ ಇವರು ಭಾರತೀಯ ಜನತಾ ಪಕ್ಷದ ಯುವ ಮೋರ್ಚ ಅಧ್ಯಕ್ಷರಾಗಿ, ಬಿಜೆಪಿ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಕ್ರಿಯ ಭಾಜಪ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಇವರು ಈಗಾಗಲೇ ೫೦ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ನೆಂಪು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನ, ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಿನ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಅವರಿಂದ ರಕ್ತದಾನಕ್ಕೆ ಸನ್ಮಾನ, ನೆಂಪು ಉತ್ಸವದಲ್ಲಿ ಸನ್ಮಾನ, ಮೊಗವೀರ ಯುವ ಯುವ ಸಂಘಟನೆ ಹಾಗೂ ಮೊಗವೀರ ಸಮಾಜದ ವಿವಿಧ ವೇದಿಕೆಗಳಲ್ಲಿ ಸನ್ಮಾನ, ಆತ್ರಾಡಿ ವಿ‌ಎಂಕೆ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸನ್ಮಾನ ಮಾತ್ರವಲ್ಲದೇ ಹಲವಾರು ರಕ್ತದಾನ ಶಿಬಿರಗಳಲ್ಲಿ ಸನ್ಮಾನ ದೊರಕಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!