Sunday, September 8, 2024

ವಿಶ್ವೇಶ್ವರ ಸೋಮಯಾಜಿ ಮೋರ್ಟು ಅವರಿಗೆ ‘ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ’ ಪ್ರದಾನ

ಕುಂದಾಪುರ: ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ದಿ|ನಾರಾಯಣ ಗಾಣಿಗರ ಸ್ಮರಣಾರ್ಥ ನಾರಾಯಣ ಗಾಣಿಗರ ಕುಟುಂಬದವರು ಪ್ರಾಯೋಜಿಸಿದ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ-2024ನ್ನು ಬಡಗುತಿಟ್ಟಿನ ಯಕ್ಷಗಾನ ಸಾಂಪ್ರದಾಯಿಕ ಶೈಲಿಯ ಭಾಗವತ, ಯಕ್ಷಗುರು, ಮದ್ದಳೆವಾದಕರಾದ ವಿಶ್ವೇಶ್ವರ ಸೋಮಯಾಜಿ ಮೋರ್ಟು ಇವರಿಗೆ ಪ್ರದಾನ ಮಾಡಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿದ ನಾರಾಯಣ ಗಾಣಿಗರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದವರು. ಅವರ ಕಲಾಸಾಧನೆಯ ನೆನಪಿಸಿಕೊಳ್ಳುತ್ತಾ, ಅವರ ಹೆಸರಲ್ಲಿ ಸಾಧಕ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡುವ ಪರಂಪರೆ ಮುಂದುವರಿಸುತ್ತಿರುವುದು ಸ್ತುತ್ಯರ್ಹವಾದುದು ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿಶ್ವೇಶ್ವರ ಸೋಮಯಾಜಿ ಅವರು ದಿ.ನಾರಾಯಣ ಗಾಣಿಗರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಈಗಲೂ ಸ್ಮರಣಾರ್ಹವಾದುದು. ಮಂದರ್ತಿ ಮೇಳದಲ್ಲಿ ನಾನು ಅವರ ಒಡನಾಡಿಯಾಗಿದ್ದೆ. ಮೇಳದಲ್ಲಿರುವಾಗ ಅವರ ಹೃದಯವೈಶಾಲ್ಯತೆಯನ್ನು ಗಮನಿಸಿದ್ದೆ. ಅವರು ಎಲ್ಲರ ಹಿತವನ್ನು ಬಯಸುವ ಕಲಾವಿದರಾಗಿದ್ದರು. ಉತ್ತಮ ಸ್ತ್ರೀವೇಷಧಾರಿಯಾಗಿದ್ದ ಅವರು ಯಕ್ಷಗಾನಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವ ಧನ್ಯತಾಭಾವ ಮೂಡುತ್ತಿದೆ ಎಂದರು.

ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ ಶೆಟ್ಟಿ, ನಾರಾಯಣ ಗಾಣಿಗರ ಪುತ್ರರಾದ ಚಂದ್ರ ಗಾಣಿಗ, ಉದಯ ಗಾಣಿಗ ಉಪಸ್ಥಿತರಿದ್ದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ಪಟೇಲರಮನೆ ಕಾರ್ಯಕ್ರಮ ನಿರ್ವಹಿಸಿ, ರಾಘವೇಂದ್ರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!