spot_img
Friday, March 27, 2026
spot_img

ಲೈಂಗಿಕ ಕಿರುಕುಳ ಆರೋಪ : ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು !

ಜನಪ್ರತಿನಿಧಿ(ಬೆಂಗಳೂರು) : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಲೋಕಸಭಾ ಚುನಾವಣೆ ಸನಿಹವಾಗುತ್ತಿರುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸದ್ದಾರೆ ಎಂದು ಸದ್ಯ ಮಾಹಿತಿ ತಿಳಿದು ಬಂದಿದೆ..

ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ ಯಡಿಯೂರಪ್ಪ ಬಾಲಕಿಯನ್ನು ಕೋಣೆಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಕೊಠಡಿಯಿಂದ ಹೊರಗೆ ಓಡಿ ಬಂದಾಗ, ಆಕೆಯ ತಾಯಿಗೆ ಪ್ರಕರಣ ನಡೆದಿರುವುದು ತಿಳಿದಿದೆ.

ಸದ್ಯ ಯಡಿಯೂರಪ್ಪ ಅವರಾಗಲಿ, ಅವರ ಕುಟುಂಬಸ್ಥರಾಗಲಿ ದಾಖಲಾಗಿರುವ ಪ್ರಕರಣದ  ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರ ತಂಡ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

53 ಮಂದಿ ವಿರುದ್ಧ ಬಾಲಕಿಯ ತಾಯಿ ದೂರು: ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಪ್ರಕರಣ ಸಂಕಷ್ಟ ತಂದೊಡ್ಡಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!