spot_img
Friday, March 27, 2026
spot_img

ಕೆಡಿಪಿ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗಂಗಾಧರ ಶೆಟ್ಟಿ ನಿಧನ

ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡರಾದ ಗಂಗಾಧರ ಶೆಟ್ಟಿ ಮಾ.15ರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾ.13ರಂದು ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ತಕ್ಷಣ ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ರಾತ್ರಿ ನಿಧರಾದರು.

ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಜನಾನುರಾಗಿಯಾಗಿದ್ದರು. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯರಾಗಿ, ರೈತ ಸಂಘದ ಕಾರ್ಯಚಟುವಟಿಕೆಗಳಲ್ಲಿ ಸದಾ ಭಾಗವಹಿಸುತ್ತಿದ್ದರು.

ಇತ್ತೀಚೆಗಷ್ಟೇ ಅವರನ್ನು ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷದ ವರಿಷ್ಠರ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ಹೇರಿಕುದ್ರು ಭಾಗದಲ್ಲಿ ‘ಗಂಗಣ್ಣ’ ಎಂದೇ ಪ್ರಸಿದ್ಧರಾಗಿದ್ದರು.

ಇವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!