spot_img
Friday, March 27, 2026
spot_img

ತೆರಿಗೆ ಪಾವತಿ ಬಾಕಿ : ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಬೀಗ ಜಡಿದ ಬಿಬಿಎಂಪಿ !

ಜನಪ್ರತಿನಿಧಿ (ರಾಜಧಾನಿ, ಬೆಂಗಳೂರು) : ಕೋಟ್ಯಾಂತರ ರೂಪಾಯಿ ತೆರಿಗೆ ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ್ದಾರೆ.

ಮಂತ್ರಿ ಮಾಲ್ ಸುಮಾರು 32 ಕೋಟಿ ವರೆಗೂ ​ತೆರಿಗೆ ಪಾವತಿ ಉಳಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕೂಡ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಾಲ್ ಗೆ ಬೀಗ ಜಡಿಯಲಾಗಿತ್ತು. ಈಗ ಮತ್ತೆ ಇಂದು(ಶನಿವಾರ) ಮಾಲ್ ಗೆ ಬೀಗ ಹಾಕಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಾಲ್‌ನ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಜಡಿದಿದ್ದಾರೆ.

ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಿದ್ದಲ್ಲದೇ, ಮಾಲ್​​ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ನೋಟಿಸ್ ಕೂಡ ಅಂಟಿಸಲಾಗಿದೆ.

ಬಿಬಿಎಂಪಿ ಅಧಿಕಾರಿಗಳು ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಗೆ ಬೀಗ ಹಾಕಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!