spot_img
Wednesday, January 22, 2025
spot_img

ಬೆಂಗಳೂರು ಮೆಟ್ರೋ 3ನೇ ಹಂತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ !

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರಿನ ವಾಹನ ದಟ್ಟಣೆ ನಿವಾರಿಸುವ ಪರಿಣಾಮಕಾರಿ ಮಾರ್ಗವೆಂದರೆ ಮೆಟ್ರೋ ವ್ಯವಸ್ಥೆ. ಈಗಾಗಲೇ ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿಕೊಂಡು ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

44.65 ಕಿ.ಮೀ ಉದ್ದದ ಎರಡು ಕಾರಿಡಾರ್‌ಗಳಾದ ಕಾರಿಡಾರ್-1 ಜೆ.ಪಿ ನಗರ 4ನೇ ಹಂತದಿಂದ ಪಶ್ಚಿಮ ಹೊರವರ್ತುಲ ರಸ್ತೆಯುದ್ದಕ್ಕೂ ಕೆಂಪಾಪುರದವರೆಗೆ 32.15 ಕಿ.ಮೀ. ಹಾಗೂ ಕಾರಿಡಾರ್ -2 ಹೊಸಹಳ್ಳಿಯಿಂದ ಮಾಗಡಿ ರಸ್ತೆಯುದ್ದಕ್ಕೂ ಕಡಬಗೆರೆವರೆಗೆ 12.50 ಕಿ.ಮೀ ಒಟ್ಟು ಅಂದಾಜು ವೆಚ್ಚ ರೂ.15,611 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಯೋಜನೆಯ ಶೇ.85 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಉಳಿದ ಅನುದಾನವನ್ನು ಕೇಂದ್ರ ನೀಡಲಿದೆ. ನಗರದಲ್ಲಿ ಜನರ ಓಡಾಟಕ್ಕೆ ಯೋಗ್ಯ  ಸಂಪರ್ಕ ಒದಗಿಸುವ ದಿಸೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!