spot_img
Friday, March 27, 2026
spot_img

ಏ.26ಮತ್ತು ಮೇ 7ಕ್ಕೆ ರಾಜ್ಯದಲ್ಲಿ ಲೋಕಸಭಾ ಚುನಾವಣೆ, ಜೂನ್ 4ಕ್ಕೆ ಫಲಿತಾಂಶ

ಲೋಕಸಭಾ ಚುನಾವಣೆ 2024 ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ಒಟ್ಟು7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ನಡೆಯಲಿದೆ ಮತ್ತು ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಹೊರ ಬೀಳಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!