spot_img
Wednesday, January 22, 2025
spot_img

ರಷ್ಯಾದ ಅಧ್ಯಕ್ಷೀಯ ಚುನಾವಣೆ : ಮತ್ತೆ ವ್ಲಾಡಿಮಿರ್ ಪುಟಿನ್ ಜಯಭೇರಿ | ಮೂರನೇ ವಿಶ್ವಯುದ್ದಕ್ಕೆ ಮುನ್ಸೂಚನೆ ಕೊಟ್ಟರೇ ಪುಟಿನ್‌ ?!

ಜನಪ್ರತಿನಿಧಿ ( ಮಾಸ್ಕೊ) : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮರಳಿ ಗೆದ್ದುಬೀಗಿದ್ದರೆ. ಶೇ. 87.17 ರಷ್ಟು ಮತಗಳನ್ನು ಚುನಾವಣೆಯಲ್ಲಿ ಪುಟಿನ್ ಅವರು ಪಡೆದಿದ್ದಾರೆ ಎಂದು ಅಂತರಾಷ್ಟ್ರೀಯ ಟಾಸ್ ಸುದ್ದಿಸಂಸ್ಥೆ ಒಕ್ಕೂಟದ ಕೇಂದ್ರ ಚುನಾವಣಾ ಆಯೋಗದ ದತ್ತಾಂಶ ಉಲ್ಲೇಖಿಸಿ ವರದಿ ಮಾಡಿದೆ.

ಕಮ್ಯೂನಿಸ್ಟ್ ಪಾರ್ಟಿ ಆಫ್ ರಷ್ಯನ್ ಫೆಡರೇಶನ್ ಅಭ್ಯರ್ಥಿ ನಿಕೊಲಾಯ್ ಖರಿಟೋನೊವ್ ಶೇ. 4.1 ರಷ್ಟು ಮತಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ನ್ಯೂ ಫೀಪಲ್ ಪಾರ್ಟಿ ಅಭ್ಯರ್ಥಿ ವ್ಲಾಡಿಸ್ಲಾವ್ ದಾವಂಕೋವ್ ಶೇ. 4.8 ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ರಷ್ಯಾ ಅಭ್ಯರ್ಥಿ ಲಿಯೊನಿಡ್ ಸ್ಲಟ್ಸ್ಕಿ ಶೇ. 3.15 ರಷ್ಟು ಮತಗಳನ್ನು ಪಡೆದಿದ್ದಾರೆ.

ಮತ್ತೆ ಚುನಾವಣೆಯಲ್ಲಿ ಗೆದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಮಾಧ್ಯಮಗಳ ವರದಿಗಾರರೊಂದಿಗೆ ಮಾತನಾಡಿ, ರಷ್ಯಾ ಹಾಗೂ ಯುಎಸ್ ನೇತೃತ್ವದ ನ್ಯಾಟೋ ಒಕ್ಕೂಟದ ನಡುವಿನ ಯಾವುದೇ ನೇರ ಸಂಘರ್ಷವು ಪೂರ್ಣ ಪ್ರಮಾಣದ ಮೂರನೇ ವಿಶ್ವ ಯುದ್ಧದಿಂದ ಒಂದು ಹೆಜ್ಜೆ ದೂರ ಎಂಬ ಅರ್ಥ ಎಂದು ಪಾಶ್ಚಿಮಾತ್ಯ ಶಕ್ತಿಗಳಿಗೆ ಎಚ್ಚರಿಕೆ ನೀಡಿದರು. ಆದರೆ, ಈ ಬಗ್ಗೆ ಯಾರೊಬ್ಬರೂ ಆಸಕ್ತಿ ತೋರುವುದು ಅಸಂಭವ ಎಂದೂ ಅವರು ಹೇಳಿದ್ದಾರೆ.

ವ್ಲಾಡಿಮಿರ್ ಪುಟಿನ್ ರಷ್ಯಾದ ಅಧ್ಯಕ್ಷರಾಗಿ ನಾಲ್ಕು ಬಾರಿ ಸೇವೆ ಸಲ್ಲಿಸಿದ್ದಾರೆ. ಮೊದಲ ಬಾರಿಗೆ 2000 ರಲ್ಲಿ ಹಾಗೂ 2004, 2012 ಹಾಗೂ 2018ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈಗ ಮತ್ತೆ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ದೊಡ್ಡ ಮತ ಹಂಚಿಕೆಯ ಅಂತರದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಸುದೀರ್ಘ ಅವಧಿಗೆ ಅಧ್ಯಕ್ಷ ಹುದ್ದೆಗೆ ಏರಿದ ಹೆಗ್ಗಳಿಕೆಗೆ ಪುಟಿನ್‌ ಪಾತ್ರವಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!