spot_img
Friday, March 27, 2026
spot_img

ಗಂಗೊಳ್ಳಿ : ರಾಷ್ಟ್ರ, ರಾಜ್ಯ ಮಟ್ಟದ ಕ್ರೀಡಾಪಟುಗಳಿಗೆ ಸನ್ಮಾನ

ಕುಂದಾಪುರ: ಕರ್ನಾಟಕ ಸರಕಾರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ವಲಯ‌ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ. ಶುಭಾಶಂಸನೆಗೈದರು. ರಾಷ್ಟ್ರ ಮಟ್ಟದ ವಿಕಲಚೇತನ ಕ್ರೀಡಾಪಟು ಶ್ರೀಲತಾ ಮತ್ತು ರಾಜ್ಯ ಮಟ್ಟದ ಕ್ರೀಡಾಪಟು ಪ್ರಾರ್ಥನಾ ಪೈ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ನಿರ್ಮಲಾ ಪೂಜಾರಿ, ಶಾಂತಿ ಖಾರ್ವಿ, ಪಂಚಾಯತ್ ಸಿಬ್ಬಂದಿಗಳಾದ ಭಾಗ್ಯ ಮತ್ತು ಚೈತ್ರಾ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ ಸ್ವಾಗತಿಸಿದರು. ನಿಖಿತಾ ಮತ್ತು ಸಂಗೀತಾ ಸನ್ಮಾನಿತರನ್ನು ಪರಿಚಯಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಆಶಾ ಕಾರ್ಯಕರ್ತೆ ಕಲ್ಪನಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!