spot_img
Saturday, December 7, 2024
spot_img

ತಂದೆ ತಾಯಿ ಡಂಪಿಗ್ ಝೋನ್ ಅಲ್ಲ. ತಂದೆ ತಾಯಿಯ ಸೇವೆ ಮಾಡುವುದು ಮಕ್ಕಳ ಕರ್ತವ್ಯ- ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ

ಗಂಗೊಳ್ಳಿ: ತಂದೆ ತಾಯಿಯ ಸೇವೆಯೇ ಭಗವಂತನ ಸೇವೆ. ಇಂದಿನ ದಿನಗಳಲ್ಲಿ ತಂದೆ ತಾಯಿ ಒಂದು ಕಡೆ ಮಕ್ಕಳು ಇನ್ನೊಂದು ಕಡೆ ವಾಸಿಸುತ್ತಿರುವ ವಾತಾವರಣ ನಿರ್ಮಾಣವಾಗುತ್ತಿದೆ. ಅವಿಭಕ್ತ ಕುಟುಂಬ ಕಾಣಲು ಸಿಗುತ್ತಿಲ್ಲ. ವಯೋವೃದ್ಧ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಮಕ್ಕಳು ಸುಖಮಯ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಕಡೆಗಳಲ್ಲಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿದೆ. ನಮ್ಮ ಸಂಪ್ರದಾಯದಲ್ಲಿ ವೃದ್ಧಾಶ್ರಮದ ಇಲ್ಲ. ತಂದೆ ತಾಯಿ ಡಂಪಿಗ್ ಜೋನ್ ಅಲ್ಲ. ತಂದೆ ತಾಯಿಯ ಸೇವೆ ಮಾಡುವುದು ಮಕ್ಕಳ ಕರ್ತವ್ಯ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು.
ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಆಶೀರ್ವಚನ ನೀಡಿ ಅವರು ಮಾತನಾಡಿದರು.

ಪೀಠಾರೋಹಣದ ಬಳಿಕ ಪ್ರಥಮ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳನ್ನು ದೇವಳದ ಆಡಳಿತ ಮೊಕ್ತೇಸರ ಜಿ.ನರಸಿಂಹ ನಾಯಕ್ ಮತ್ತು ಡಾ.ಕಾಶೀನಾಥ ಪೈ ಸ್ವಾಗತಿಸಿ, ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್, ಜಿ.ಪ್ರದೀಪ್ ಭಟ್, ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!