Sunday, September 8, 2024

ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ ರಥೋತ್ಸವ ಸಂಪನ್ನ

ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಶನಿವಾರ ವಿಜೃಂಭಣೆಯಿಂದ ಜರಗಿತು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಬ್ರಹ್ಮರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು.

ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!