spot_img
Wednesday, January 22, 2025
spot_img

ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪ. ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು ವರ್ಗಾವಣೆಗೊಳಿಸಿ ಭಾರತೀಯ ಚುನಾವಣಾ ಆಯೋಗ ಆದೇಶ.

ಜನಪ್ರತಿನಿಧಿ (ನವದೆಹಲಿ) : ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಇಂದು(ಸೋಮವಾರ) ನಿರ್ದೇಶನ ನೀಡಿದೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.

ಮಾತ್ರವಲ್ಲದೇ, ಆಯಾ ಮುಖ್ಯಮಂತ್ರಿಗಳ ಕಛೇರಿಗಳಲ್ಲಿ ಉಸ್ತುವಾರಿ ವಹಿಸಿದ್ದ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು(ಡಿಜಿಪಿ) ಕೂಡ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಬೃಹನ್‌ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹಲವು ಹೆಚ್ಚುವರಿ ಆಯುಕ್ತರು ಹಾಗೂ ಉಪ ಆಯುಕ್ತರನ್ನು ವರ್ಗಾವಣೆ ಮಾಡಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ದೇಶಾದ್ಯಂತ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಈ ಕ್ರಮ ತೆಗೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!