spot_img
Wednesday, January 22, 2025
spot_img

ಚುನಾವಣಾ ಬಾಂಡ್‌ : ಕೇಂದ್ರ ಸರ್ಕಾರದ ವಾದವನ್ನು ಸಾರಾಸಗಟಾಗಿ ತಳ್ಳಿಹಾಕಿದ ಸುಪ್ರೀಂ ಕೋರ್ಟ್‌ !

ಜನಪ್ರತಿನಿಧಿ (ನವ ದೆಹಲಿ) : ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿದ ತನ್ನ ತೀರ್ಪನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಜೆಂಡಾವಾಗಿ ‘ದುರುಪಯೋಗ’ ಮಾಡಲಾಗುತ್ತಿದೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಇಂದು(ಸೋಮವಾರ) ಸಾರಾಸಗಟಾಗಿ ತಳ್ಳಿಹಾಕಿದೆ. ತನ್ನ ತೀರ್ಪುಗಳನ್ನು ಯಾರೋ ಮೂರನೇ ವ್ಯಕ್ತಿಗಳು ಹೇಗೆ ಅರ್ಥೈಸುತ್ತಾರೆ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ನ್ಯಾಯಪೀಠ ನ್ಯಾಯಧೀಶರಾದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ನ್ಯಾಯಾಧೀಶರಾಗಿ, ನಾವು ಕೇವಲ ಕಾನೂನಿನ ನಿಯಮದಲ್ಲಿದ್ದೇವೆ ಮತ್ತು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತೇವೆ. ನ್ಯಾಯಾಧೀಶರು, ನಾವು ಸಾಮಾಜಿಕ ಮಾಧ್ಯಮಗಳಲ್ಲಿಯೂ ಚರ್ಚಿಸುತ್ತೇವೆ, ನಾವು ಈ ಎಲ್ಲಾ ನಿಲುಗಳನ್ನು ತೆಗೆದುಕೊಳ್ಳುವಷ್ಟು ವಿಶಾಲವಾಗಿದ್ದೇವೆ. ಆದರೇ, ನಾವು ನಮ್ಮ ತೀರ್ಪನ್ನು, ನಿರ್ದೇಶನಗಳನ್ನು ಮಾತ್ರ ಜಾರಿಗೊಳಿಸುತ್ತಿದ್ದೇವೆ” ಎಂದು ಹೇಳಿದರು.

ರಾಜಕೀಯ ಪಕ್ಷಗಳು ಖರೀದಿಸಿದ ಚುನಾವಣಾ ಬಾಂಡ್‌ಗಳ ಬಹಿರಂಗಪಡಿಸುವಿಕೆಯ ಡೇಟಾಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಇವೆ ಎಂದು ವಿಚಾರಣೆಯ ಸಂದರ್ಭದಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಜೆಐ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ತಿಳಿಸಿದರು.

“ಕಪ್ಪುಹಣಕ್ಕೆ ಕಡಿವಾಣ ಹಾಕುವುದು ಅಂತಿಮ ಗುರಿಯಾಗಿತ್ತು ಮತ್ತು ನ್ಯಾಯಾಲಯದ ಹೊರಗೆ ಈ ತೀರ್ಪು ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಈ ನ್ಯಾಯಾಲಯವು ತಿಳಿದಿರಬೇಕು.  ಮುಜುಗರ ಉಂಟು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಬರಹಗಳ ಸುರಿಮಳೆಯಾಗುತ್ತಿದ್ದು, ಇದೀಗ ಅಂಕಿಅಂಶಗಳನ್ನು ಜನರಿಗೆ ಬೇಕಾದಂತೆ ತಿರುಚಬಹುದು. ಅಂಕಿಅಂಶಗಳ ಆಧಾರದ ಮೇಲೆ ಯಾವುದೇ ರೀತಿಯ ಪೋಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದರು.

ಇಂದು ಬೆಳಗ್ಗೆ, ರಾಜಕೀಯ ಪಕ್ಷಗಳಿಗೆ ವ್ಯಕ್ತಿಗಳು ಮತ್ತು ಕಂಪನಿಗಳಿಗೆ ದೇಣಿಗೆ ನೀಡಲು ಅನುಮತಿಸಿದ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸದಿರುವ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಮಾರ್ಚ್ 21 ರಂದು ಸಂಜೆ 5 ಗಂಟೆಯೊಳಗೆ ಎಲ್ಲಾ ಬಾಂಡ್-ಸಂಬಂಧಿತ ವಿವರಗಳನ್ನು ಒದಗಿಸುವಂತೆ ಎಸ್‌ಬಿಐಗೆ ಆದೇಶಿಸಿದೆ.   

ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ಕೆಲ ನಿಯಮಿತ ಮಾಹಿತಿಗಳನ್ನಷ್ಟೇ ಒದಗಿಸಿದೆ. ಆದರೆ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ಇರುವ ಅಫಿಡವಿಟ್‌ ಅನ್ನು ಎಸ್‌ಬಿಐ ಕೋರ್ಟ್ ಗೆ ಸಲ್ಲಿಸಬೇಕು. ಆಯ್ಕೆ ಮಾಡಲಾದ ಮಾಹಿತಿಯನ್ನಷ್ಟೇ ನೀಡಿದರೆ ಆಗುವುದಿಲ್ಲ. ಯುನಿಕ್‌ ನಂಬರ್‌ ಸೇರಿ ಸಮಗ್ರ ಮಾಹಿತಿಯನ್ನು ಕೋರ್ಟ್‌ಗೆ ಒದಗಿಸಬೇಕು. ಇದುವರೆಗೆ ಚುನಾವಣೆ ಆಯೋಗಕ್ಕೆ ಎಸ್‌ಬಿಐ ಎರಡು ಪಟ್ಟಿ ನೀಡಿದೆ. ಈಗ ಎಲ್ಲ ಮಾಹಿತಿ ಒದಗಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ಇನ್ನು, ಎಸ್‌ಬಿಐ ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ವಿವರಗಳು ಅಪೂರ್ಣವಾಗಿದೆ ಎಂದು ಗಮನಿಸಿದ ಐವರು ನ್ಯಾಯಾಧೀಶರ ಪೀಠವು ಲೋಪವನ್ನು ವಿವರಿಸಲು ಬ್ಯಾಂಕ್‌ಗೆ ನೋಟಿಸ್ ಜಾರಿ ಮಾಡಿತ್ತು ಮತ್ತು ಮಾರ್ಚ್ 18ಕ್ಕೆ (ಇಂದು, ಸೋಮವಾರ) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿತ್ತು.

ಫೆಬ್ರವರಿ 15 ರಂದು ತನ್ನ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಕೇಂದ್ರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತು ಮತ್ತು ಅದನ್ನು “ಅಸಂವಿಧಾನಿಕ” ಎಂದು ಹೇಳಿತ್ತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!