spot_img
Friday, March 27, 2026
spot_img

ಲೋಕಸಭಾ ಚುನಾವಣೆ : ಮಾಜಿ ಸಿಎಂ  ಡಿವಿಎಸ್‌ ಶೀಘ್ರ ಕಾಂಗ್ರೆಸ್‌ ಸೇರ್ಪಡೆ !? | ಮೈಸೂರಿನಿಂದ ಕಣಕ್ಕೆ !

ಜನಪ್ರತಿನಿಧಿ (ಬೆಂಗಳೂರು ) : ಈ ಭಾರಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೇಟ್‌ ಕೈ ತಪ್ಪಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ. ವಿ ಸದಾನಂದ ಗೌಡ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಸದಾನಂದಗೌಡ ಅವರು ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಇನ್ನು, ಸ್ವತಃ ಸದಾನಂದ ಗೌಡ ಅವರು ಈಗಾಗಲೇ ಕಾಂಗ್ರೆಸ್‌ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಡಿವಿ ಸದಾನಂದಗೌಡ ಇಂದು(ಸೋಮವಾರ) 72ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಬಾರಿ ಅವರಿಗೆ ಟಿಕೆಟ್‌ ನೀಡದೇ ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಿಂದ ಟಿಕೆಟ್‌ ಕೊಟ್ಟಿದೆ. ಇದರಿಂದ ಅಸಮಾಧಾನಗೊಂಡಿರುವ ಡಿವಿಎಸ್‌ ಬಿಜೆಪಿಯ ಬಗ್ಗೆ ಬಹಿರಂಗವಾಗಿ ಅಸಮಾದಾನ ವ್ಯಕ್ತ ಪಡಿಸಿದ್ದರು. ಕಾಂಗ್ರೆಸ್‌ ಬಗ್ಗೆ  ಹೊಗಳಿಕೆಯ ಮಾತನ್ನಾಡಿದ್ದರು.

ಮೈಸೂರಿನಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಡಿವಿ ಸದಾನಂದಗೌಡ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಈಗ ಸದ್ದು ಮಾಡುತ್ತಿದ್ದು, ಸದಾನಂದ ಗೌಡರು ಕಾಂಗ್ರೆಸ್‌ ನಾಯಕರು ತನ್ನನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿರುವುದು ಕೂಡ ಇದಕ್ಕೆ ಪುಷ್ಟಿ ನೀಡಿದಂತಿದೆ.

ಇನ್ನು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಸದಾನಂದ ಗೌಡ ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಕಾಂಗ್ರೆಸ್‌ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ. ಕುಟುಂಬದವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದಿರುವ ಸದಾನಂದ ಗೌಡ ಅವರು, ಸ್ವಾರ್ಥಕ್ಕಾಗಿ ಟಿಕೆಟ್‌ ತಪ್ಪಿಸಿದರೆ ಯೋಚನೆ ಮಾಡಬೇಕಾಗುತ್ತದೆ ಎಂದಿರುವುದು ಕುತೂಹಲ ಮೂಡಿಸಿದ್ದಲ್ಲದೇ, ಈ ಮೂಲಕ ಬಿಜೆಪಿ ತೊರೆಯುವ ಬಗ್ಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದರೇ ಎಂಬ ಅನುಮಾನ ಹುಟ್ಟುಹಾಕಿದೆ.

ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ. ಟಿಕೇಟ್‌ ಸಿಗದ ಬೆನ್ನಿಗೆ ಸದಾನಂದ ಗೌಡ ಅವರು ಬಿಜೆಪಿ ಪಕ್ಷದಲ್ಲಿ ಶಿಸ್ತು ಉಳಿದಿಲ್ಲ ಎಂದು ಬಹಿರಂಗವಾಗಿಯೇ ಟೀಕಿಸಿದ್ದರು.

ಮೈಸೂರು – ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿವಿಎಸ್‌ ಸ್ಪರ್ಧೆ ?

ಕಾಂಗ್ರೆಸ್‌ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಲೆಕ್ಕಚಾರದಲ್ಲಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಹಿನ್ನೆಲೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮಾಹಿತಿ ಒದಗಿ ಬಂದಿದೆ. ಪುತ್ತೂರು ಕಾಂಗ್ರೆಸ್‌ ಶಾಸಕ ಅಶೋಕ್‌ ಕುಮಾರ್‌ ರೈ ಅವರು ಈ ವಿಚಾರದಲ್ಲಿ ಸದಾನಂದ ಗೌಡ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಈಗ ಕೇಳಿ ಬರುತ್ತಿದೆ.

ಇನ್ನು, ಈ ಊಹಾಪೋಹಗಳು ಹರಿದಾಡುತ್ತಿರುವುದರ ನಡುವೆ ಡಿ.ವಿ ಸದಾನಂದ ಗೌಡ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ʼನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು.ʼ ಎಂದು ಮಾರ್ಚ್‌ 13, 2024 ರಂದು ಬರೆದುಕೊಂಡಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!