spot_img
Thursday, May 14, 2026
spot_img

ದೇಶದ ಬ್ಯಾಂಕಿಂಗ್‌ ವ್ಯವಸ್ಥೆಯ ಮೇಲೆ ಸೈಬರ್‌ ದಾಳಿ ಸಾಧ್ಯತೆ : ಆರ್‌ಬಿಐ

ಜನಪ್ರತಿನಿಧಿ  (ನವ ದೆಹಲಿ) :  ದೇಶದ ಬ್ಯಾಂಕಿಂಗ್‌ ವ್ಯವಸ್ಥೆಗೆ ದೊಡ್ಡ ಮಟ್ಟದ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಳ್ಳುವ ತುರ್ತಿದೆ ಎಂದಿ ಬ್ಯಾಂಕ್‌ಗಳಿಗೆ ಆರ್‌ಬಿ ಐ ಸೂಚನೆ ನೀಡಿದೆ.

ದೇಶದ ಬ್ಯಾಂಕಿಂಗ್‌ ವ್ಯವಸ್ಥೆ ಮೇಲೆ ಸೈಬರ್‌ ದಾಳಿ ಆಗುವ ಸಾಧ್ಯತೆ ಇದೆ. ಇಂತಹ ಅಪಾಯಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ  ಎಂದು ಬ್ಯಾಂಕ್‌ಗಳಿಗೆ ಆರ್‌ಬಿಐ ಮಾಹಿತಿ ನೀಡಿದೆ.

ಸೈಬರ್‌ ಭದ್ರತೆ ಹಾಗೂ ಮಾಹಿತಿ ತಂತ್ರಜ್ಞಾನ ಪರೀಕ್ಷೆ (ಸಿಎಸ್‌ಐಟಿಇ) ವ್ಯವಸ್ಥೆಗೆ ಬ್ಯಾಂಕ್‌ಗಳನ್ನು ಮೇಲ್ದರ್ಜೆಗೆ ಏರಿಸಬೇಕು. ತಪಾಸಣೆ ಸಂದರ್ಭದಲ್ಲಿ ಕಂಡುಬಂದಿರುವ ಲೋಪ- ದೋಷಗಳನ್ನು ನಿವಾರಿಸಲೂ ಮುಂದಾಗಬೇಕು ಎಂದು ತಿಳಿಸಿದೆ.

ಸೈಬರ್‌ ದಾಳಿಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣೆಯ ಸಿದ್ಧತೆ, ವಂಚನೆ ಪತ್ತೆ ದಕ್ಷತೆ ಸೇರಿದಂತೆ ಬ್ಯಾಂಕ್‌ಗಳ ವಿವಿಧ ಸಾಮರ್ಥ್ಯಗಳನ್ನು ನಿರ್ಣಯಿಸಲು ಸಿಎಸ್‌ಐಟಿಇ ಸಹಾಯ ಮಾಡುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!