spot_img
Friday, March 27, 2026
spot_img

ಮೊಗವೀರ ಮಹಾಜನ ಸೇವಾ ಸಂಘ ಕುಂದಾಪುರ ಶಾಖೆಯ ಮಾಜಿ ಕೋಶಾಧಿಕಾರಿ ಬಚ್ಚು ಕುಂದರ್ ನಿಧನ


ಕುಂದಾಪುರ, ಮಾ.19: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಮಾಜಿ ಕೋಶಾಧಿಕಾರಿ, ಶಿಕ್ಷಣ ಇಲಾಖೆಯ ನಿವೃತ್ತ ಉದ್ಯೋಗಿ, ದೇವಲ್ಕುಂದ ನಿವಾಸಿ ಬಚ್ಚು ಕುಂದರ್ (ಬಿ.ಸಿ ಕುಂದರ್) (83 ವರ್ಷ) ವಯೋ ಸಹಜ ಕಾರಣದಿಂದ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಮಾ.19ರಂದು ನಿಧನರಾದರು.

ಮೊಗವೀರ ಮಹಾಜನ ಸಂಘದಲ್ಲಿ ಹಿರಿಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಇವರು ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಪರಮದೈವಭಕ್ತರಾಗಿದ್ದ ಅವರು ದೇವಸ್ಥಾನದ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮಿತಭಾಷಿಯಾಗಿದ್ದ ಅವರು ನಗುಮೊಗದಿಂದ ಭಕ್ತರನ್ನು ದೇವಸ್ಥಾನಕ್ಕೆ ಸ್ವಾಗತಿಸಿಕೊಂಡು ಧಾರ್ಮಿಕತೆಯ ಬಗ್ಗೆ ಅಭಿಮಾನದ ಮಾತುಗಳನ್ನಾಡುತ್ತಿದ್ದರು. ದೇವಸ್ಥಾನದಲ್ಲಿ ಪ್ರಾಮಾಣಿಕ ನೌಕರರಾಗಿ, ದೇವಸ್ಥಾನದ ಆರ್ಥಿಕ ಅಭಿವೃದ್ಧಿಯಲ್ಲಿ ದುಡಿದಿದ್ದರು.
ಮೃತರು ಪುತ್ರ, ಸೊಸೆ, ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ:
ಬಚ್ಚು ಕುಂದರ್ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಕುಂದಾಪುರ ಶಾಖಾಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಸಂತಾಪ ಸೂಚಿಸಿದ್ದಾರೆ.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ, ಮೊಗವೀರ ಸಮಾಜದ ಹಲವಾರು ಗಣ್ಯರು, ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆಯಲ್ಲಿ ಮಹಾಜನ ಸೇವಾ ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಚಿರಶಾಂತಿ ಕೋರಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!