spot_img
Saturday, December 7, 2024
spot_img

ಸಿಎಎ ನಿಯಮಗಳಿಗೆ ತಡೆಕೋರಿ ಬಂದ ಅರ್ಜಿಗಳ ವಿಚಾರಣೆ : ಕೇಂದ್ರಕ್ಕೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಲು ʼಸುಪ್ರೀಂʼ ಸೂಚನೆ !

ಜನಪ್ರತಿನಿಧಿ (ನವ ದೆಹಲಿ) : ಪೌರತ್ವ ತಿದ್ದುಪಡಿ(ಸಿಎಎ) ನಿಯಮಗಳ ಜಾರಿಗೆ ತಡೆ ಕೋರಿ ಸಲ್ಲಿಸಿರು ಅರ್ಜಿಗಳ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌, ಮೂರು ವಾರಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆಯನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ಮಾಡಿದ್ದು, ಸದ್ಯ ಪ್ರಕರಣವನ್ನು ಏಪ್ರಿಲ್‌ ೯ಕ್ಕೆ ಮುಂದೂಡಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, ೨೦ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ನಾಲ್ಕು ವಾರಗಳ ಸಮಯಾವಕಾಶ ಕೇಳಿದ್ದರು.  ಪೌರತ್ವ ತಿದ್ದುಪಡಿ ತಿದ್ದುಪಡಿ ಕಾಯ್ದೆ ೨೦೧೯ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಲೇವಾರಿ ಮಾಡುವವರೆಗೂ ಕಾಯ್ದೆಯ ನಿಯಮಗಳ ಜಾರಿಗೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಸುಮಾರು ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಮನವಿ ಮಾಡಿಕೊಂಡಿದ್ದವು.

ಸಿಎಎ ಕಾಯ್ದೆಯು ಯಾರೊಬ್ಬರ ಪೌರತ್ವವನ್ನೂ ಕಸಿದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಮೆಹ್ತಾ ಪೀಠದ ಗಮನಕ್ಕೆ ತಂದರು.

ಪೌರತ್ವ ತಿದ್ದುಪಡಿ ಮಸೂದೆಗೆ ೨೦೧೯ರ ಡಿಸೆಂಬರ್‌ ೧೧ ರಂದು ಸಂಸತ್‌ ಅಂಗೀಕಾರ ನೀಡಿತ್ತು. ಮಾರನೇ ದಿನೇ ರಾಷ್ಟ್ರಪತಿ ಅಂಕಿತ ಹಾಕಿದ್ದರು. ಇತ್ತೀಚೆಗೆ ಅದರ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು.

೨೦೧೪ರ ಡಿಸೆಂಬರ್‌ ೩೧ಕ್ಕೂ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಹಿಂದೂ, ಸಿಖ್‌, ಜೈನ್‌, ಬೌದ್ಧ, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆ ಅನುವು ಮಾಡಿಕೊಟ್ಟಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!