Wednesday, September 11, 2024

ಲೋಕಸಭಾ ಚುನಾವಣೆ : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಸಿಎಂ ಅಸಮಾಧಾನ | ಡಿವಿಎಸ್‌ ಅವರನ್ನು ಕಾಂಗ್ರೆಸ್‌ಗೆ ಕರೆತರಲು ಡಿಸಿಎಂ ಪ್ರಯತ್ನ !

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿಇ ದಿವಿ ಸದಾನಂದ ಗೌಡ ಅವರು ಕಾಂಗ್ರೆಸ್‌ ಸೇರ್ಪಡೆಗೊಳ್ಳುವುದರ ಬಗ್ಗೆ ಈಗ ಮತ್ತೊಂದು ತಿರುವು ಕಾಣಿಸಿಕೊಂಡಿದೆ. ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಯಾಗುವುದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ ಎಂಬ ಮಾತುಗಳು ಈಗ ಕೇಳಿಬರುತ್ತಿವೆ.

ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್‌ ತಪ್ಪಿದ್ದಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದು ಸೇರ್ಪಡೆಗೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಯಾವುದೇ ಕಾರಣವಿಲ್ಲದೇ ಮತ್ತೆ ಕೆಲವು ತಿಂಗಳುಗಳ ಒಳಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡ ಪ್ರಸಂಗ ಮತ್ತೆ ಮರುಕಳಿಸಬಹುದಾದ ಸಾಧ್ಯತೆಗಳಿವೆ ಎಂಬ ದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼನೋʼ  ಎಂದಿದ್ದಾರೆ ಎಂಬ ಮಾತು ಕಾಂಗ್ರೆಸ್‌ ಪಾಳಯದಿಂದ ಕೇಳಿ ಬರುತ್ತಿದೆ. ಆದರೂ, ಡಿಸಿಎಂ ಡಿ,ಕೆ ಶಿವಕುಮಾರ್‌ ಸದಾನಂದ ಗೌಡರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಪ್ರಯತ್ನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಲೋಕಸಭಾ ಟಿಕೇಟ್‌ ನೀಡುವ ಭರವಸೆಯನ್ನೂ ನೀಡಿದ್ದಾರೆ ಎನ್ನಲಾಗುತ್ತಿದೆ.

ಸದಾನಂದಗೌಡರನ್ನು ಕಾಂಗ್ರೆಸ್ ಟಿಕೆಟ್‌ನಲ್ಲಿ ಕಣಕ್ಕಿಳಿಸಲು ಸಿಎಂ ವಿರೋಧ ವ್ಯಕ್ತಪಡಿಸಿದ್ದರೆ, ಶಿವಕುಮಾರ್ ಅವರು ಅಸಮಾಧಾನಿತ ಗೌಡರನ್ನು ಸಂಪರ್ಕಿಸಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸದಾನಂದಗೌಡರು ಕಳೆದ ನವೆಂಬರ್‌ನಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಆದರೆ, ತಮ್ಮ ಬೆಂಬಲಿಗರಿಂದ ಒತ್ತಡವಿದೆ ಎಂದ ಅವರು, ತಮ್ಮ ಕ್ಷೇತ್ರವಾದ ಬೆಂಗಳೂರು ಉತ್ತರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ವರಿಷ್ಠರು ಬೆಂಗಳೂರು ಉತ್ತರದಿಂದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿ, ಸದಾನಂದ ಗೌಡರಿಗೆ ಕೋಕ್‌ ನೀಡಿರುವ ಹಿನ್ನೆಲೆಯಲ್ಲಿ ಅವರು ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್‌ನತ್ತ ಮುಖಮಾಡಿ ನಿಂತಿದ್ದಾರೆ ಎಂಬ ಗುಸುಗುಸ ಚರ್ಚೆ ಈಗ ಆರಂಭವಾಗಿದೆ.

ರಾಜಕೀಯದಲ್ಲಿ ತಮ್ಮ ಪಕ್ಷ ಟಿಕೆಟ್ ನಿರಾಕರಿಸಿದರೆ ಬೇರೆ ಪಕ್ಷಕ್ಕೆ ಹೋಗುವುದು ಸಾಮಾನ್ಯ ಎಂದು ಶಿವಕುಮಾರ್ ಹೇಳಿದರು. ಇದೇ ವೇಳೆ ಗೌಡರನ್ನು ಪಕ್ಷದಿಂದ ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರೋಧವೂ ಇದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಪಿಸೋಡ್ ಮರುಕಳಿಸುವ ಭಯ ಸಿದ್ದರಾಮಯ್ಯಗೆ ಇದೆ. 

ರಿಯ ಒಕ್ಕಲಿಗ ನಾಯಕರನ್ನು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಂಗಳವಾರ ಸದಾನಂದಗೌಡರು ಒಕ್ಕಲಿಗ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿದರು. ಒಕ್ಕಲಿಗರನ್ನು ಬದಿಗೊತ್ತಿದ ಬಿಜೆಪಿ ವಿರುದ್ಧ ಸಂಘದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!