spot_img
Saturday, December 7, 2024
spot_img

ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್​​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ !

ಜನಪ್ರತಿನಿಧಿ (ನವ ದೆಹಲಿ) :  ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ (India Post Payments Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 47 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶ.

ಹುದ್ದಯ ಮಾಹಿತಿ: ಬಿಹಾರ- 5,  ದೆಹಲಿ- 1, ಗುಜರಾತ್- 8, ಹರಿಯಾಣ- 4, ಜಾರ್ಖಂಡ್​-1, ಕರ್ನಾಟಕ- 1, ಮಧ್ಯ ಪ್ರದೇಶ- 3, ಮಹಾರಾಷ್ಟ್ರ- 2, ಒಡಿಶಾ- 1, ಪಂಜಾಬ್​- 4, ರಾಜಸ್ಥಾನ- 4, ತಮಿಳುನಾಡು-2, ಉತ್ತರ ಪ್ರದೇಶ- 11 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 1, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: SC/ST/PWD ಅಭ್ಯರ್ಥಿಗಳು: ರೂ.150, ಸಾಮಾನ್ಯ ಅಭ್ಯರ್ಥಿಗಳು: ರೂ.750 ಆಗಿದ್ದು ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕಿದೆ.


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಲಿಸಲು  15/03/2024 ರಿಂದಲೇ ಆರಂಭವಾಗಿದ್ದು, ಆಸಕ್ತರು ಏಪ್ರಿಲ್ 5, 2024 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!