Wednesday, September 11, 2024

ಲೋಕಸಭಾ ಚುನಾವಣೆ : ಮಾರ್ಚ್​ 22 ಕ್ಕೆ ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ : ಬಿಎಸ್‌ವೈ

ಜನಪ್ರತಿನಿಧಿ ( ನವ ದಹಲಿ) : ಮಾರ್ಚ್​ 22 ರಂದು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು (ಬುಧವಾರ) ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳಿಲ್ಲ. ಆದ್ದರಿಂದ ಬಿಜೆಪಿಯ ಅತೃಪ್ತ ನಾಯಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು, ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೇಳಗಿಳಿಯಬೇಕಾಗುತ್ತೆ ಎಂಬ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಬಿಜೆಪಿ ಉತ್ತಮ ಬೆಳವಣಿಗೆ ಕಂಡಿದೆ. ತಮ್ಮ ಮಗನಿಗೆ ಸೀಟು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ನೀಡುವ ಅಗತ್ಯತೆ ಇಲ್ಲ. ಜನ ಉತ್ತರ ನೀಡುತ್ತಾರೆ ಎಂದಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಮೈತ್ರಿ ಪಕ್ಷ ಜೆಡಿಎಸ್ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಜೆಡಿಎಸ್ ಮುಖಂಡರು ನಮ್ಮ ಜೊತೆಗೆ ಇರುತ್ತಾರೆ. ಬಿಜೆಪಿ ಹೈಕಮಾಂಡ್ ನ ಅಂತಿಮ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡುತ್ತೇವೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಅನುಕೂಲ ಆಗಿದೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗುತ್ತೆ. ಅಮಿತ್ ಶಾ, ಮೋದಿ ಜೊತೆಗೆ ಹೆಚ್. ಡಿ ದೇವೇಗೌಡರು ಸಂಪರ್ಕದಲ್ಲಿದ್ದಾರೆ ಎಂದವರು ಮಾಹಿತಿ ನೀಡಿದರು.

ಇನ್ನು, ಅಸಮಾಧಾನಿತ ನಾಯಕರ ಜೊತೆ ನಾನು ಮಾತನಾಡುತ್ತೇನೆ. ಸಂಗಣ್ಣ ಕರಡಿ ಜೊತೆ ನಾನು ಮಾತನಾಡಿದ್ದೇನೆ, ಸಂಗಣ್ಣ ಕರಡಿ ನಮ್ಮ ಜೊತೆ ಇರುವ ವಿಶ್ವಾಸವಿದೆ. ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮಾಧುಸ್ವಾಮಿ ಜೊತೆ ನಾನು ಮಾತನಾಡುತ್ತೇನೆ. ಜೆಸಿ ಮಾಧುಸ್ವಾಮಿ ಅವರ ಸಹಕಾರದೊಂದಿಗೆ ನಾವು ಚುನಾವಣೆ ಗೆಲ್ಲಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇವೆ. ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸ ಆಗುತ್ತಿದೆ. ಅಸಮಾಧಾನಿತ ನಾಯಕರಿಗೆ ಮುಂದೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!