spot_img
Friday, January 17, 2025
spot_img

ಕಾಂಗ್ರೆಸ್‌ ಎಂದೂ ಧರ್ಮದ ಆಧಾರದ ಮೇಲೆ ಚುನಾವಣೆ ಎದುರಿಸಿಲ್ಲ : ಮಧು ಬಂಗಾರಪ್ಪ

ನಮ್ಮ ಯೋಜನೆಗಳು ಜನರನ್ನು ತಲುಪಿವೆ, ಗೆಲ್ಲುವ ವಿಶ್ವಾಸವಿದೆ : ಮಧು ಬಂಗಾರಪ್ಪ ಭರವಸೆ  

ಜನಪ್ರತಿನಿಧಿ (ಕುಂದಾಪುರ) : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಶೇ. 91ರಷ್ಟು ಜನರನ್ನು ಗ್ಯಾರಂಟಿ ಯೋಜನೆಗಳ ಮೂಲಕ ತಲುಪಿದೆ ಎಂದು ಹೇಳುವುದಕ್ಕೆ ನಾನು ಹೆಮ್ಮೆಪಡುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಸಾಧನೆಯ ಆಧಾರದ ಮೇಲೆ ಮತ ಕೇಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕುಂದಾಪುರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾರಣಿಗಳು ಸಾಮಾನ್ಯವಾಗಿ ಚುನಾವಣೆಯನ್ನು ಎರಡು ರೀತಿಯಲ್ಲಿ ಎದುರಿಸುತ್ತಾರೆ. ಕೆಲವರು ಜಾತಿ ಮತ್ತು ಧರ್ಮದ ಮೇಲೆ ಕೇಂದ್ರೀಕರಿಸಿದರೆ, ಇತರರು ಭಾವನೆಗಳಿಗೆ ಮೇಲೆ ಚುನಾವಣೆ ಎದುರಿಸುತ್ತಾರೆ. ಕಾಂಗ್ರೆಸ್ ಎಂದಿಗೂ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಿದ ಉದಾಹರಣೆಯೇ ಇಲ್ಲ. ಬದಲಿಗೆ, ಕಾಂಗ್ರೆಸ್ ಜನರ ಭಾವನೆಗಳನ್ನು ಅರ್ಥಮಾಡಿಕೊಂಡಿದೆ ಮತ್ತು ಅವರ ಅಗತ್ಯಗಳನ್ನು ಪರಿಹರಿಸಲು ಶ್ರಮಿಸುತ್ತದೆ. ಪಕ್ಷವು ಭರವಸೆ ನೀಡಿದ ಎಲ್ಲಾ ಐದು ಭರವಸೆಗಳನ್ನು ಈಡೇರಿಸುವ ಮೂಲಕ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ. ದೇಶಾದ್ಯಂತ ಜನರು ರಾಜಕೀಯ ಬದಲಾವಣೆಯನ್ನು ಬಯಸುತ್ತಿದ್ದಾರೆ. ಉಡುಪಿಯಲ್ಲಿ ಎರಡು ಬಾರಿ ಚುನಾವಣೆಯಲ್ಲಿ ಗೆದ್ದು ಸಾಧನೆ ತೋರಿದರೂ ಜನ ಶೋಭಾ ಕರಂದ್ಲಾಜೆ ಅವರನ್ನು ಕೆಳಗಿಳಿಸುವಂತೆ ಹೇಳಿರುವ ಉದಾಹರಣೆ ನಿಮ್ಮ ಕಣ್ಣ ಮುಂದೆಯೇ ಇದೆ ಎಂದು ಅವರು ಹೇಳಿದರು.

ಇನ್ನು, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರ ಸಾಧನೆ ನಗಣ್ಯ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವನ್ನು ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ. ನಾನು ಈ ಹಿಂದೆ ಜೆಡಿಎಸ್‌ನಲ್ಲಿದ್ದು, ಕಾಂಗ್ರೆಸ್‌ಗೆ ಸೇರಿದ್ದಕ್ಕೆ ಹೆಮ್ಮೆಯಾಗುತ್ತಿದೆ. ನಾನು ಜೆಡಿಎಸ್‌ನಲ್ಲಿಯೇ ಇದ್ದಿದ್ದರೆ, ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಣಾಮಗಳನ್ನು ಎದುರಿಸಬೇಕಾಗುತ್ತಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸಹೋದರಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆಲ್ಲುವ ವಿಶ್ವಾಸವಿದೆ. ದೇವರು ಮಂದಿರ ಗುಡಿಯಲ್ಲಿರಲಿ. ನಾವು ನಮ್ಮ ಯೋಜನೆಗಳ ಮೂಲಕ, ಸಾಧನೆಗಳ ಮೂಲಕ ಚುನಾವಣೆ ಎದರಿಸುತ್ತೇವೆ. ರಾಜ್ಯ ಸರ್ಕಾರದ ಭರವಸೆಗಳು ಮತ್ತು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಜನಕೇಂದ್ರಿತ ಕೆಲಸಗಳು ಕಾಂಗ್ರೆಸ್‌ ಅಭ್ಯರ್ಥಿಯನ್ನು ಈ ಕ್ಷೇತ್ರದಲ್ಲಿ ಆಶಿರ್ವಾದವಾಗಿ ಬರಲಿದೆ ಎಂದು ಅವರು ಹೇಳಿದರು.

ಇನ್ನು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕೆಲಸ ಮೂಲಕ ಜನರ ಮುಂದೆ ಮತ ಕೇಳುತ್ತೇವೆ. ಇಲ್ಲಿ ಯಾರೋ ಬಂಡಾಯ ನಿಂತರೆ ಅವರಿಂದ ಮತ ವಿಭಜನೆಯಾಗಿ ನಮಗೆ ಲಾಭವಾಗುತ್ತದೆ ಎಂಬುದನ್ನಷ್ಟೇ ನಾವು ಎದುಗಾಣುತ್ತಿಲ್ಲ. ಕಾಂಗ್ರೆಸ್‌ ಪಕ್ಷ ದೇಶಕ್ಕೆ ಕೊಟ್ಟ ಯೋಜನೆಗಳು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಮನಸ್ಸಿನಲ್ಲಿ ಅಚ್ಚಾಗಿ ಉಳಿದಿವೆ. ಜನ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುತ್ತಾರೆ ಎನ್ನುವ ನಂಬಿಕೆ ಇದೆ. ಈಶ್ವರಪ್ಪ ಅವರು ಸ್ಪರ್ಧಿಸಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ನಾವು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಕೆ ಗೋಪಾಲ ಪೂಜಾರಿ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ, ವಿವಿಧ ಬ್ಲಾಕ್ ಅಧ್ಯಕ್ಷರಾದ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಜಿ ಎ ಬಾವ, ರಾಜು ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ, ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘವು ಕುಂದಾಪುರದಲ್ಲಿ ಸುಸಜ್ಜಿತ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!