spot_img
Thursday, May 7, 2026
spot_img

ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌ : ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯನ್ನು ಇ.ಡಿ ವಿರೋಧಿಸಿದೆ : ಸಚಿವೆ ಅತಿಶಿ

ಜನಪ್ರತಿನಿಧಿ (ನವ ದೆಹಲಿ) : ಅಬಕಾರಿ ನೀತಿ ಹಗರಣದ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬರುವಲ್ಲಿಯವರೆಗೆ ಜಾರಿ ನಿರ್ದೇಶನಾಲಯ(ಇ.ಡಿ) ಕಾಯುತ್ತಿಲ್ಲ, ಇದರ ಹೊರತಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲಗ ಅವರಿಗೆ ನಿಋಂತರ ಸಮನ್ಸ್‌ ಜಾರಿ ಮಾಡುತ್ತಿದೆ ಎಂದು ದೆಹಲಿ ಸರ್ಕಾರದ ಸಚಿವೆ ಅತಿಶಿ ಇಂದು(ಬುಧವಾರ) ಹೇಳಿದ್ದಾರೆ.

ಕಾನೂನಿನ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ ಗೌರವಿಸುವ ಅಗತ್ಯವಿದೆ. ಇ.ಡಿ ಸಮನ್ಸ್ ಕಳುಹಿಸುತ್ತಲೇ ಇದೆ. ಅವುಗಳ ನ್ಯಾಯಬದ್ಧತೆಯನ್ನು ನಾವು ಪ್ರಶ್ನಿಸಿದ್ದೇವೆ. ಆದರೇ ಸಮನ್ಸ್‌ ಗೆ ಕೇಜ್ರೀವಾಲ್‌ ನೀಡಿದ ಉತ್ತರಕ್ಕೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇ.ಡಿ ಕೇಜ್ರೀವಾಲ್‌ ಅವರು ನೀಡಿರುವ ಅರ್ಜಿಯನ್ನು ವಿರೋಧ ಮಾಡಿದೆ. ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ. ಈ ವಿಚಾರಕ್ಕೆ ಸಂಬಂಧಿಸದಂತೆ ಇ.ಡಿ ಪ್ರತಿಕ್ರಿಯೆಯನ್ನು ಕೇಳಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನೀಡಲಾಗಿರುವ ಸರಣಿ ಸಮನ್ಸ್‌ ಸಂಬಂಧಿಸಿದಂತೆ ವಿವರಣೆ ಕೇಳಿದ ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಇಂದು (ಬುಧವಾರ) ನೋಟಿಸ್‌ ಜಾರಿ ಮಾಡಿದೆ. ಇ.ಡಿ ಸಮನ್ಸ್‌ ಪ್ರಶ್ನಿಸಿ ಕೇಜ್ರಿವಾಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸದ್ಯ, ಈ ಸಂಬಂಧಿಸಿದಂತೆ ವಿಚಾರಣೆಯನ್ನು ಏಪ್ರಿಲ್‌ ೨೨ಕ್ಕೆ ನಿಗದಿಪಡಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!