spot_img
Monday, March 23, 2026
spot_img

ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ, ಕ್ರಮ ತೆಗೆದುಕೊಳ್ಳಿ : ಚುನಾವಣಾಧಿಕಾರಿಗೆ ಕಾಂಗ್ರೆಸ್‌ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ವಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಲ್ಲಿ ರಾಜ್ಯ ಕಾಂಗ್ರೆಸ್‌ ಒತ್ತಾಯಿಸಿದೆ.

ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಸ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ ಎಂದು ಹೇಳಿದೆ.

ಮಾತ್ರವಲ್ಲದೇ, ಈ ತೇಜಸ್ವೀ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ

• ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು!

• ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು!

• ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು!

• ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು!

ಆದರೆ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ!

ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!