spot_img
Monday, March 23, 2026
spot_img

ಜನರ ಸಮಸ್ಯೆಗಳಿಗೆ ಸ್ಪಂದಿಸಿದಲ್ಲಿ ಗೆಲುವು ಸಾಧ್ಯ-ಕೆ. ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ : ಅಭ್ಯರ್ಥಿ ಘೋಷಣೆಗೆ ಮುನ್ನ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವುದು ಸಾಮಾನ್ಯ. ಆಯ್ಕೆಯಾದ ಅನಂತರ ನಾವೆಲ್ಲ ಒಟ್ಟಾಗಿ ಒಂದಾಗಿ ಚುನಾವಣೆ ನಡೆಸುತ್ತೇವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.

ಬ್ರಹ್ಮಾವರದಲ್ಲಿ ಬುಧವಾರ ಅವರು ಸುದ್ದಿಗಾರರೊಂದಿಗೆ ನಡೆಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯ ರಚನೆ, ವಾರಾಹಿ ಕಾಮಗಾರಿ, ತಾಲ್ಲೂಕುಗಳ ರಚನೆ, ಕಿಂಡಿ ಅಣೆಕಟ್ಟುಗಳ ರಚನೆ, ಡೀಮ್ಡ್ ಫಾರೆಸ್ಟ್ ಸಮಸ್ಯೆಗಳ ಪರಿಹಾರಕ್ಕೆ ಕ್ರಮ, ಹಕ್ಕುಪತ್ರ ವಿತರಣೆಗೆ ಕ್ರಮ, ಪ್ರಮುಖ ರೈಲುಗಳ ಸಂಚಾರಕ್ಕೆ ಕ್ರಮ, ಪ್ರಮುಖ ರಸ್ತೆಗಳ ಅಭಿವೃದ್ಧಿ, ಅಡಿಕೆಗೆ ಉತ್ತಮ ಧಾರಣೆ, ಮೀನುಗಾರರಿಗೆ ಡಿಸೇಲ್ ನಲ್ಲಿ ಸಬ್ಸಿಡಿ ಹೆಚ್ಚಳ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಜನಪ್ರತಿನಿಧಿ ಆಗುವವರು ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸುವುದು ಅಗತ್ಯ. ಯಾವ ಸರ್ಕಾರ ಇದ್ದರೂ ಒಳ್ಳೆಯ ಕೆಲಸ ಆಗಬೇಕು, ಪಕ್ಷ ಮುಖ್ಯ ಅಲ್ಲ ಎಂದು ಅವರು ಹೇಳಿದರು.

ಬ್ರಹ್ಮಾವರ ಕೃಷಿ ಕಾಲೇಜಿನ ಪ್ರಾರಂಭದ ಬಗ್ಗೆ ಉತ್ತರಿಸಿದ ಅವರು ಈಗಿರುವ ಡಿಪ್ಲೊಮಾ ಕಾಲೇಜು ಯಥಾ ಪ್ರಕಾರ ಮುಂದುವರಿಯುವುದು. ಕೃಷಿ ಕಾಲೇಜು ಸ್ಥಾಪನೆ ಮತ್ತು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಬಗ್ಗೆಯೂ ಗಮನ ನೀಡಲಾಗುವುದು. ಸ್ಥಗಿತ ಗೊಂಡಿರುವ ಕಾಮಗಾರಿಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.

ಕೇರಳ – ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ: ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ರೈಲ್ವೇಯ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡುವೆ ಎಂದರು. ಬಡವರಿಗೆ ಆಯು?ನ್ ಕಾರ್ಡ್‌ನ ಪ್ರಯೋಜನ ತ್ವರಿತಗತಿಯಲ್ಲಿ ಸಿಗುವಂತಾಗಲು ಮತ್ತು ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಬಳಸುವಂತಾಗಲು ಒತ್ತು ನೀಡುತ್ತೇನೆ. ಮೋದಿ ಅಲೆಗಿಂತಲೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ಮಾಡಿ ಗೆಲ್ಲುವುದು ಮುಖ್ಯ. ಯಾರು ಕೆಲಸ ಮಾಡುತ್ತಾರೋ ಅವರನ್ನು ಜನರು ಆಯ್ಕೆ ಮಾಡಬೇಕು. ಕೆಲಸ ಮಾಡಲು ಆಗದವರು ಚುನಾವಣೆಗೆ ನಿಲ್ಲಬಾರದು ಎಂದು ಅವರು ಮನದ ಇಂಗಿತವನ್ನು ಹಂಚಿಕೊಂಡರು.

ಕುಂದಾಪ್ರ ಕನ್ನಡದ ಬಗ್ಗೆ ವಿಶೇಷ ಆಸಕ್ತಿ ಇರುವ ತಂಡ ರಚನೆ: ಕುಂದಾಪ್ರ ಕನ್ನಡ ಅಧ್ಯಯನ ಪೀಠ ನಿರ್ಮಿಸಿ ರೂ.೧.೫ ಕೋಟಿ ಮೀಸಲಿರಿಸುವಲ್ಲಿ ಶ್ರಮಿಸಿದ ಬಗ್ಗೆ ಹೆಮ್ಮೆ ಇದೆ. ಮುಂದೆ ಕುಂದಾಪ್ರ ಕನ್ನಡದ ಬಗ್ಗೆ ವಿಶೇಷ ಆಸಕ್ತಿ ಇರುವ ತಂಡವನ್ನು ರಚಿಸಿ ಆಯ್ಕೆ ಮಾಡಿ ನೈಜ ಕಾಳಜಿಯ ಜೊತೆಗೆ ಕುಂದಾಪ್ರ ಕನ್ನಡಕ್ಕಾಗಿ ಕೆಲಸ ಮಾಡುವ ಬಗ್ಗೆ ಗಮನ ನೀಡುತ್ತೇನೆ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!