spot_img
Monday, March 16, 2026
spot_img

ಸುಪ್ರೀಂ ತ್ರಿಸದಸ್ಯ ನ್ಯಾಯಪೀಠದಿಂದ ಕೇಜ್ರೀವಾಲ್‌ ಅರ್ಜಿ ವಿಚಾರಣೆ !

ಜನಪ್ರತಿನಿಧಿ (ನವ ದೆಹಲಿ) : ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ತಮ್ಮನ್ನು ಬಂಧಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಕ್ರಮವನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ತ್ರಿಸದಸ್ಯ ಪೀಠ ಇಂದು(ಶುಕ್ರವಾರ) ವಿಚಾರಣೆ ಮಾಡಲಿದೆ.

ಕೇಜ್ರಿವಾಲ್‌ ಪರ ವಕೀಲ ಅಭಿಷೇಕ್‌ ಮನಿ ಸಿಂಘ್ವಿ ಕೋರ್ಟ್‌ನಲ್ಲಿ ಹಾಜರಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ಮಾಡಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್‌ ನ್ಯಾಯಪೀಠದ ಮುಂದೆ ಭಿನ್ನವಿಸಿಕೊಂಡಿದ್ದಾರೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ಪೀಠದ ಮುಂದೆ ಅರ್ಜಿಯನ್ನು ಉಲ್ಲೇಖಿಸಿ ಸಿಜೆಐ ಸಿಂಘ್ವಿ ಅವರಿಗೆ ಸೂಜಿಸಿದರು.

ಸಂಜೀವ್‌ ಖನ್ನಾ ಪೀಠದ ಮುಂದೆ ಸಿಂಘ್ವಿ ಅವರು ಪ್ರಕರಣವನ್ನು ಉಲ್ಲೇಖಿಸಿದರು. ಮೂಬರು ನ್ಯಾಯಮೂರ್ತಿಗಳು ಇರುವ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ನ್ಯಾ. ಖನ್ನಾ ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!