Sunday, September 8, 2024

ಬಿ. ಬಿ. ಹೆಗ್ಡೆ ಕಾಲೇಜು: ಮಣಿಪಾಲ ಸ್ಕಿಲ್ ಡೆವಲಫ್ ಮೆಂಟ್ ಸೆಂಟರ್ ನೊಂದಿಗೆ ಶೈಕ್ಷಣಿಕ ಒಡಂಬಡಿಕೆ

 

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಮಣಿಪಾಲದ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಡುವಿನ ಶೈಕ್ಷಣಿಕ ಒಡಂಬಡಿಕೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಮುಖ್ಯಸ್ಥರಾದ ಡಾ| ಸುರ್ಜಿತ್ ಸಿಂಗ್ ಪಾಬ್ಲಾ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜೊತೆಗೆ ತಂತ್ರಜ್ಞಾನದ ಅರಿವನ್ನು ಮೂಡಿಸಿಕೊಂಡು ಹೆಜ್ಜೆ ಇಟ್ಟಾಗಷ್ಟೇ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ” ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಗಣಕಶಾಸ್ತ್ರ ಉಪನ್ಯಾಸಕರಾದ ಪ್ರಣಮ್ ಬಿ. ನೇತೃತ್ವದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಸಾಫ್ಟ್‌ವೇರ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶರತ್ ಕುಮಾರ್ ಹಾಗೂ ಅಕ್ಷಯ್ ಕುಮಾರ್ ತಮ್ಮ ಹೊಸ ಉತ್ಪನ್ನಗಳನ್ನು ಪರಿಚಯಿಸಲಾಯಿತು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ರಿಜಿಸ್ಟ್ರಾರ್ ಡಾ| ಪ್ರದೀಪ್ ಕುಮಾರ್ ಶೆಟ್ಟಿ, ವಿಭಾಗ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮಿ ಆನಂದನ್, ಪ್ಲೇಸ್ಮೆಂಟ್ ಅಡ್ವೈಸರ್ ಡಾ| ವಿಠ್ಠಲೇಶ್ವರ ಉಪಸ್ಥಿತರಿದ್ದರು.

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಕು. ರಶ್ಮಿ ಸ್ವಾಗತಿಸಿದರು, ಶ್ರೀಮತಿ ವಿಲ್ಮಾ, ಶ್ರೀಮತಿ ಜಯಲಕ್ಷ್ಮಿ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಮೇಘಾ ವಂದಿಸಿದರು ಮತ್ತು ಪ್ರಣಮ್ ಬಿ. ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!