spot_img
Thursday, December 5, 2024
spot_img

5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಹಸಿರು ನಿಶಾನೆ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧ ಪಟ್ಟಮತೆ ಇಂದು(ಶುಕ್ರವಾರ) ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ.

ಶಿಕ್ಷಣ ಇಲಾಖೆಗೆ  ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ.

ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರುಗಳಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು.

ಏಕ ಸದಸ್ಯ ನ್ಯಾಯಪೀಠದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ನಡೆ ನೀಡಿತ್ತು. ವಿಭಾಗೀಯ ನ್ಯಾಯಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿತ್ತು. ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಹಾಗೂ ಪೋಷಕರ ಸ್ಥಿತಿ ಅಯೋಮಯವಾಗಿತ್ತು. ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ವಿದ್ಯಾರ್ಥಿಗಳ ಗೊಂದಲಕ್ಕೆ ಈ ಮೂಲಕ ತೆರೆ ಎಳೆದಿದೆ.

5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ‌ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ.

ಅರ್ಜಿದಾರರ ಪರ ವಕೀಲರು ವಿಭಾಗೀಯ ನ್ಯಾಯಪೀಠದ ಮುಂದೆ ವಾದ ಮಂಡಿಸಿ, 1 ರಿಂದ 8 ನೇ ತರಗತಿ, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯಿದೆಯ ಪ್ರಕಾರ, ಕರ್ನಾಟಕ ಶಿಕ್ಷಣ ಕಾಯ್ದೆಯಡಿ ನಿಯಮಾವಳಿ ರೂಪಿಸದೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವ ಅಧಿಕಾರವಿಲ್ಲ ಹಾಗೂ ರಾಜ್ಯವು ಪ್ರಾಥಮಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ.

ಕರ್ನಾಟಕ ಶಿಕ್ಷಣ ಕಾಯ್ದೆಯ ನಿಬಂಧನೆಗಳ ಪ್ರಕಾರ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸುವ ಮೊದಲು ರಾಜ್ಯ ಸರ್ಕಾರವು ಪೋಷಕರು, ಶಿಕ್ಷಕರು ಮತ್ತು ಶಾಲೆಗಳನ್ನು ಸಂಪರ್ಕಿಸಬೇಕು ಎಂದು ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ವಾದಿಸಿದೆ. ಶಿಕ್ಷಣ ಹಕ್ಕು ಕಾಯಿದೆಯು 6 ರಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಅನುಮತಿಸುವುದಿಲ್ಲ ಎಂದಿದೆ.

ಇಷ್ಟಾಗ್ಯೂ, ರಾಜ್ಯ ಸರ್ಕಾರವು 5, 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. ಏಕ ಸದಸ್ಯ ನ್ಯಾಯಪೀಠ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಮೊದಲು, 11 ನೇ ತರಗತಿಯ ಪರೀಕ್ಷೆಗಳನ್ನು ಮುಕ್ತಾಯಗೊಳಿಸಲಾಯಿತು. ಹೀಗಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳಿಸುವಂತೆ ವಿಭಾಗೀಯ ನ್ಯಾಯಪೀಠ ಸೂಚಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!