spot_img
Saturday, May 9, 2026
spot_img

ಹಣಕ್ಕಾಗಿ ಪ್ರಶ್ನೆ : ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ !

ಜನಪ್ರತಿನಿಧಿ (ನವ ದೆಹಲಿ) : ಹಣಕ್ಕಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲಕ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ಇಂದು (ಶನಿವಾರ) ಸಿಬಿಐ ದಾಳಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಪಾಲ್‌ ನಿರ್ದೇಶನದ ಮೇಲೆ ಸಿಬಿಐ, ಮಹುವಾ ಮೋಯಿತ್ರಾ ವಿರುದ್ಧ ನಿನ್ನೆ(ಶುಕ್ರವಾರ) ಎಫ್‌ಐಆರ್‌ ದಾಖಲಾಗಿತ್ತು.

ಇಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ಇರುವ ಮಹುವಾ ಮೊಯಿತ್ರಾ ಅವರ ನಿವಾಸ ಹಾಗೂ ಕಚೇರಿಯನ್ನು ಒಳಗೊಂಡು ದೆಹಲಿಯಲ್ಲಿರುವ ಅವರ ಕಚೇರಿಗಳ ಮೇಲೆಯೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿಉ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲೋಕಪಾಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ಸಂಪೂರ್ಣ ವರದಿಯನ್ನು ಆರು ತಿಂಗಳುಗಳ ಒಳಗಾಗಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇನ್ನು, ಸಂಸತ್ತಿನಲ್ಲಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಮಾತನಾಡಲು ಮಹುವಾ ಮೊಯಿತ್ರಾ ಅವರು ದುಬೈ ಮೂಲದ ಉದ್ಯಮಿ ದರ್ಶನ್‌ ಹಿರಾನಂದಾನಿಯಿಂದ ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದರು ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಮಹುವಾ ಮೊಯಿತ್ರಾ ಮೇಲೆ ಆರೋಪಿಸಿದ್ದರು.

ಈ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸದನದ ನೀತಿ ಸಮಿತಿ, ಮಹುವಾ ಅವರನ್ನು ಉಚ್ಛಾಟಿಸಬೇಕು ಎಂದು ವರದಿ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!