spot_img
Wednesday, April 1, 2026
spot_img

ಲೋಕಸಭಾ ಚುನಾವಣೆ ಹಿನ್ನೆಲೆ, ಮದ್ಯ ಮಾರಾಟ ನಿಷೇಧ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ ೧೯೬೭ ಕಲಂ ೧೦(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ ರ ಕಲಂ೧೩೫(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಏಪ್ರಿಲ್ 24 ರ ಸಂಜೆ 5ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ. 4 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿ?ಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!