Wednesday, September 11, 2024

ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪೂರ್ವ ಸಿದ್ಧತೆ

ಉಡುಪಿ: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಎಲ್ಲಾ. ಪೂರ್ವ ಸಿದ್ಧತೆಗಳನ್ನು ಮಾಡಲಾಗಿದ್ದು, ಜಿಲ್ಲೆಯ 272 ಶಾಲೆಗಳಿಂದ 14,331 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು. ಪರೀಕ್ಷೆಯನ್ನು ನಡೆಸಲು ಒಟ್ಟು 806 ಮಂದಿಯನ್ನು ನೇಮಿಸಲಾಗಿದ್ದು ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಪ್ರಶ್ನೆಪತ್ರಿಕೆ ಪಾಲಕರು ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಪಡೆಯಲು ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯಲು ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಸಂಚಾರಿ ವಿಚಕ್ಷಣಾ ದಳವನ್ನು ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸ್ಥಾನಿಕ ಜಾಗೃತ ದಳವನ್ನು ಪೊಲೀಸ್ ಪಹರೆಯನ್ನು ತುರ್ತು ಚಿಕಿತ್ಸಾ ಘಟಕವನ್ನೂ ಸ್ಥಾಪಿಸಲಾಗಿದೆ. ಪ್ರತಿಯೊಂದು ವರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ಮೀಟರ್ ತನಕ ಸಿ.ಆರ್.ಪಿ.ಸಿ ಸೆಕ್ಷನ್ 144 ರಂತೆ ಪ್ರತಿಬಂಧಕಾಜ್ಞೆಯನ್ನು ವಿಧಿಸಲಾಗಿದೆ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆಯದಂತೆ ಪಾರದರ್ಶಕತೆಯಿಂದ ನಡೆಸಲು ಪರೀಕ್ಷೆ ನಡೆಯುವ ಕೇಂದ್ರಗಳ ಕೊಠಡಿಗಳಲ್ಲಿ ಸಿ.ಸಿ.ಟಿ.ವಿಯನ್ನು ಅಳವಡಿಸಿದ್ದು ಜಿಲ್ಲಾ ಪಂಚಾಯತ್ ಸಂಕೀರ್ಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯಲಿ ಸಿ.ಸಿ.ಟಿ.ವಿಯನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಶೇಖರಣಾ ಸ್ಥಳದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದು ಸರಕಾರದ ಸುತ್ತೋಲೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಮತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!