spot_img
Wednesday, April 1, 2026
spot_img

ಮೇಕೆದಾಟು ಯೋಜನೆ : “ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ದೇವೇಗೌಡರು ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ : ಡಿಕೆಶಿ

ಜನಪ್ರತಿನಿಧಿ (ಬೆಂಗಳೂರು) : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ “ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಹೇಳಿದ್ದಾರೆ.

ಈಗ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನಾದರೂ ಮನಗಂಡು ಕೇಂದ್ರ ಸರಕಾರ ಮೇಕೆದಾಟು ಆಣೆಕಟ್ಟು ಯೋಜನೆಗೆ ಅನುಮತಿ ನೀಡುತ್ತದೆ ಎಂಬ ವಿಶ್ವಾಸ ನನ್ನದು. ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್‌ ಪಕ್ಷವು “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು ಎಂದು ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!