spot_img
Wednesday, January 22, 2025
spot_img

ಬಾರಕೂರು: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಬ್ರಹ್ಮಾವರ :  ಬಾರಕೂರು ಸಮೀಪದ ಹೊಸಾಳ ನಾಗರಮಠದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ ಯುವಕರು ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟ ದುರ್ದೈವಿಗಳು.

ಮಾ.26ರ ಬೆಳಿಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದರು. ನೀರಿನಲ್ಲಿ ತಮ್ಮ ನಿಯಂತ್ರಣ ಕಳೆದುಕೊಂಡು ಒದ್ದಾಡುತ್ತಿರುವುದು ಕಂಡ ಸ್ಥಳೀಯರು ರಕ್ಷಣೆಗೆ ಮುಂದಾದರೂ ಕೂಡಾ ಪ್ರಯೋಜನಕ್ಕೆ ಬರಲಿಲ್ಲ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಬಂದು ಕಾರ್ಯಾಚರಣೆ ನಡೆಸಿದ್ದು ಮೃತದೇಹ ಪತ್ತೆಯಾಗಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!