spot_img
Wednesday, April 1, 2026
spot_img

ಧರ್ಮ ಯುದ್ದಕ್ಕೂ ಮುನ್ನಾ ಮಂಜುನಾಥನ ದರ್ಶನ ಮಾಡಿದ್ದೇನೆ | ಜನರು ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ : ಡಿಕೆಶಿ

ಜನಪ್ರತಿನಿಧಿ (ದಕ್ಷಿಣ ಕನ್ನಡ) : ನನ್ನ ಬದುಕಿನಲ್ಲಿ ಶ್ರೀ ಮಂಜುನಾಥ ಹಾಗೂ ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ನಾನು ಪ್ರತಿ ಬಾರಿ ಧರ್ಮ ಯುದ್ಧ ಆರಂಭಿಸುವ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಹೇಳಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಡಿಕೆಶಿ ವರದಿಗಾರರಿಗೆ ಪ್ರತಿಕ್ರಿಯಿಸಿದರು. ಈ ಬಾರಿಯೂ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶಿರ್ವಾದ ಪಡೆದೆ ಎಂದವರು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಲೋಕಸಭಾ ಚುನಾವಣಾ ತಯಾರಿ ಹೇಗಿದೆ ಎಂದು ವರದಿಗಾರರೊಬ್ಬರು ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ಮಂಜುನಾಥನ ಶಕ್ತಿಯನ್ನುಯ ʼಮಾತು ಬಿಡದ ಮಂಜುನಾಥʼ ಎಂದೇ ಹೇಳುತ್ತಾರೆ. ಹಾಗೆಯೇ ನಾವು ಕೂಡ ಚುನಾವಣೆಗೂ ಮೊದಲು ಕೊಟ್ಟ ಮಾತನ್ನು ಬಿಡದೇ ಪಾಲಿಸಿದ್ದೇವೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ. ಜನರನ್ನು ಸಂಪರ್ಕಿಸುತ್ತೇವೆ. ಅವರಲ್ಲಿ ನಮಗೆ ಇನ್ನಷ್ಟು ಶಕ್ತಿ ನೀಡಿ ಎಂದು ಮತ ಯಾಚಿಸುತ್ತೇವೆ. ಈ ದೇವರು ನಮಗೆ ನುಡಿದಂತೆ ನಡೆಯಲು ಶಕ್ತಿ ನೀಡಿರುವುದೇ ನಮ್ಮ ಭಾಗ್ಯ ಎಂದು ಹೇಳಿದ್ದಾರೆ.

ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಇನ್ನು ಜನರು ತೀರ್ಮಾನ ಮಾಡುತ್ತಾರೆ. ಸಾವಿರಾರು ಮಹಿಳೆಯರು ಇಲ್ಲಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಿ ಬರುತ್ತಾರೆ. ಆ ಮೂಲಕ ತೀರ್ಥಯಾತ್ರೆ ಧರ್ಮ ಯಾತ್ರೆ ನಡೆಯುತ್ತಿದೆ. ಜನರ ಋಣ ನಮ್ಮ ಮೇಲಿದೆ. ಜನರು ಕೂಡ ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!