spot_img
Friday, April 3, 2026
spot_img

ಜಾತಿ ಗಣತಿ ವರದಿ : ನಿಷ್ಪಕ್ಷಪಾತ ಸಮಿತಿ ರಚನೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಜನಪ್ರತಿನಿಧಿ (ಬೆಂಗಳೂರು ) : ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿ ಸಲ್ಲಿಸಿರುವ ‘ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ)ಯನ್ನು ಆಕ್ಷೇಪಿಸಿ ಹೈಕೋರ್ಟ್​ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಎಲ್ಲಾ ಜಾತಿ ಹಾಗೂ ಸಮುದಾಯಗಳ ಸಮಗ್ರ ಮತ್ತು ವೈಜ್ಞಾನಿಕ ಜಾತಿ ಗಣತಿ (ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ) ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನಿಷ್ಪಕ್ಷಪಾತ ಸಮಿತಿ ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ನಿವಾಸಿಗಳಾದ ಕೆ ಸಿ ಶಿವರಾಮ್, ಎಸ್‌ ವಿ ಮುನಿರಾಜು ಹಾಗೂ ಕೆ ಜಿ ಕುಮಾರ್‌ ಎಂಬುವವರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ಮಾಡಿದೆ.

ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಆಯೋಗಕ್ಕೆ 2014ರ ಜನವರಿ 23ರಂದು ನೀಡಿರುವ ಆದೇಶವನ್ನು ಅಸಾಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ಘೋಷಿಸಬೇಕು. ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಾತಿ ಗಣತಿ ವರದಿಯನ್ನು ಸಾರ್ವಜನಿಕಗೊಳಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಅರ್ಜಿ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ, ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಿ ಆರ್ ರವಿಶಂಕರ್ ಅವರು, ಜಾತಿ ಆಧಾರಿತ ಗಣತಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಂದಿನ ಎಲ್ಲಾ ಪ್ರಕ್ರಿಯೆಗಳನ್ನೂ ಸ್ಥಗಿತಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಪೀಠವು ಜಾತಿ ಗಣತಿ ಪ್ರಶ್ನಿಸಿರುವ ಸಂಬಂಧ ಈಗಾಗಲೇ ಹಲವು ಅರ್ಜಿ ಸಲ್ಲಿಕೆಯಾಗಿರುವಾಗ ಈ ಅರ್ಜಿಯ ಔಚಿತ್ಯತೆ ಏನು ಎನ್ನುವ ಪ್ರಶ್ನೆ ಮಾಡಿತ್ತು. ಅಂತಿಮವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಸದ್ಯ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿ ಹೈಕೋರ್ಟ್‌ ಆದೇಶಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!