spot_img
Saturday, February 14, 2026
spot_img

ಫೆಮಾ ಉಲ್ಲಂಘನೆ : ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್‌

ಜನಪ್ರತಿನಿಧಿ  (ನವ ದೆಹಲಿ) : ಜಾರಿ ನಿರ್ದೇಶನಾಲಯ(ಇಡಿ) ಮಾರ್ಚ್ 28 ರಂದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹಾಗೂ ಉದ್ಯಮಿ ದರ್ಶನ್ ಹಿರಾನಂದನಿ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಸುದ್ದಿ ಮೂಲಗಳು ಇಂದು(ಬುಧವಾರ) ಮಾಹಿತಿ ನೀಡಿವೆ.

49 ವರ್ಷದ ತೃಣಮೂಲ ಕಾಂಗ್ರೆಸ್ ನಾಯಕಿ ಮೊಯಿತ್ರಾ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ ಈ ಹಿಂದೆಯೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಮೊಯಿತ್ರಾ ವಿರುದ್ಧದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪಗಳ ಕುರಿತು ತನಿಖೆ ನಡೆಸುವಂತೆ ಭ್ರಷ್ಟಾಚಾರ-ನಿಗ್ರಹ ಒಂಬುಡ್ಸ್‌ಮನ್ ಲೋಕಪಾಲ್ ಸಿಬಿಐಗೆ ನಿರ್ದೇಶನ ನೀಡಿದ ಕೆಲವು ದಿನಗಳ ನಂತರ, ಶನಿವಾರ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಪ್ರಶ್ನೆಗಾಗಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕಿಯ ನಿವಾಸದ ಮೇಲೆ ದಾಳಿ ನಡೆಸಿತ್ತು.

ಇನ್ನು, ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಮೊಯಿತ್ರಾ ಅವರು ಹಣಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!