spot_img
Tuesday, March 31, 2026
spot_img

ರಾಜ್ಯಕ್ಕೆ ತೆರಿಗೆ ಅನ್ಯಾಯ : ವಿತ್ತ ಸಚಿವರೇ… ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ? : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ. ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ ಯೋಜನೆಯಲ್ಲಿ, ಅನ್ನಭಾಗ್ಯದ ಅಕ್ಕಿಯಲ್ಲಿ ಹೀಗೆ ಸಾಲು ಸಾಲು ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸಿದ್ದರಾಮಯ್ಯ, ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನು ದನಿ ಎತ್ತಬೇಕಾಗಿದೆ. ಇದು ಕನ್ನಡಿಗರಾದ ನಮ್ಮೆಲ್ಲರ ಸ್ವಾಭಿಮಾನದ ಪ್ರಶ್ನೆಯೂ ಹೌದು ಎಂದಿದ್ದಾರೆ.

ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರೇ, ಮಾನ್ಯ ಪ್ರಹ್ಲಾದ ಜೋಶಿ ಅವರೇ,  ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಹಾರಿಕೆ ಉತ್ತರ ನೀಡಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಬಿಡಿ, ನಾನು ಹೇಳಿದ ಇಷ್ಟೂ ವಿಚಾರಗಳಲ್ಲಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ನಿಮ್ಮ ಸರ್ಕಾರ ಮಾಡಿದ್ದರೆ ದಾಖಲೆಗಳನ್ನಿಟ್ಟು ಮಾತನಾಡಿ. ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!