Wednesday, September 11, 2024

ʼಮೋದಿ ಅಲೆʼ ಅಥವಾ ʼಮೋದಿ ಸುನಾಮಿʼ ಎನ್ನುವಂತದ್ದೆಲ್ಲಾ ದಕ್ಷಿಣ ಭಾರತದಲ್ಲಿ ಎಲ್ಲಿಯೂ ಇಲ್ಲ : ಸಚಿವ ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಕಲಬುರಗಿ) : ʼಮೋದಿ ಅಲೆʼ ಅಥವಾ ʼಮೋದಿ ಸುನಾಮಿʼ ಎನ್ನುವಂತದ್ದೆಲ್ಲಾ ದಕ್ಷಿಣ ಭಾರತದಲ್ಲಿ ಎಲ್ಲಿಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಭಾರತದಲ್ಲಿ ‘ಮೋದಿ ಸುನಾಮಿ’ ಇದ್ದಿದ್ದರೆ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಏಕೆ ಮೈತ್ರಿ ಮಾಡಿಕೊಳ್ಳುತ್ತಿತ್ತು ? ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದು ಏನನ್ನು ತೋರಿಸುತ್ತದೆ? ಟಿವಿ ಪರದೆಗಳಲ್ಲಿ ‘ಮೋದಿ ಗ್ಯಾರಂಟಿ’ ಬರುತ್ತಿದೆ. ಆದರೆ ಕಾಂಗ್ರೆಸ್ ‘ಗ್ಯಾರಂಟಿ’ ಈಗಾಗಲೇ ಜನರನ್ನು ತಲುಪಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲ ‘ಶ್ಯಾಡೋ ಸಿಎಂ’ ಎಂಬ ಹೇಳಿಕೆ ನೀಡುವುದು ಮೋದಿಯವರಿಗೆ ಅಭ್ಯಾಸವಾಗಿ ಹೋಗಿದೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಕರ್ನಾಟಕದ ಉಪಮುಖ್ಯಮಂತ್ರಿ ಎಂಬುದನ್ನು ಯಾಕೆ ಮರೆಯುತ್ತಿದ್ದಾರೆ ಎಂಬುದು ತಿಳಿದಿಲ್ಲ ಎಂದು ತಿಳಿಸಿದರು.

ಬಿವೈ ವಿಜಯೇಂದ್ರ ನಾಯಕತ್ವವನ್ನು ಬಿಜೆಪಿ ಕಾರ್ಯಕರ್ತರು ಒಪ್ಪಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿಯಲ್ಲಿ ಹೆಚ್ಚು ವಂಶಾಡಳಿತ ರಾಜಕೀಯವಿದೆ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಕ್ಷೇತ್ರದಲ್ಲಿಯೇ ‘ಗೋ ಬ್ಯಾಕ್’ ಅಭಿಯಾನ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!