spot_img
Monday, March 16, 2026
spot_img

ದೇಶದಾದ್ಯಂತ ಟೋಲ್ ಪಾವತಿ ಸೇವೆಗಳಿಗೆ ಶೀಘ್ರದಲ್ಲೇ ತೆರೆ : ನಿತಿನ್‌ ಗಡ್ಕರಿ

ಜನಪ್ರತಿನಿಧಿ (ನವ ದೆಹಲಿ) :  ದೇಶದಾದ್ಯಂತ ಟೋಲ್ ಪಾವತಿ ಸೇವೆಗಳಿಗೆ ಶೀಘ್ರದಲ್ಲೇ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿದ್ದಾರೆ.

ಸದ್ಯ, ಫಾಸ್ಟ್ ಟ್ಯಾಗ್ ಪಾವತಿ ಸೇವೆ ಇದ್ದರೂ ಟೋಲ್ ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ಕಾಣಿಸುತ್ತಿದ್ದು, ಈ ಸಮಸ್ಯೆಗಳನ್ನು ಕಡಿತಗೊಳಿಸಲು ಕೇಂದ್ರ ರಸ್ತೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರು ಹೊಸ ಯೋಜನೆ ರೂಪಿಸಿದ್ದು, ದೇಶದಲ್ಲಿ ಟೋಲ್‌ ಸಂಗ್ರಹಕ್ಕೆ ಟೋಲ್‌ಗೇಟ್‌ಗಳ ಬದಲಾಗಿ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರಲು ಮುಂದಾಗಿದ್ದಾರೆ.

ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿ ಮಾಹಿತಿ ನೀಡಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ‘ ದೇಶಾದ್ಯಂತ ಸ್ಯಾಟಲೈಟ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರುತ್ತೇವೆ. ಹೊಸ ಯೋಜನೆ ಮೂಲಕ ದೇಶದ ಜನ ಎಷ್ಟು ಕಿಲೋಮೀಟರ್‌ವರೆಗೆ ರಸ್ತೆಯನ್ನು ಬಳಸಿರುತ್ತಾರೋ, ಅಷ್ಟು ಕಿಲೋಮೀಟರ್‌ವರೆಗೆ ಮಾತ್ರ ಟೋಲ್‌ ಸಂಗ್ರಹಿಸಲಾಗುತ್ತದೆ. ಜನರ ಬ್ಯಾಂಕ್‌ ಖಾತೆಯಿಂದಲೇ ಹಣ ನೇರವಾಗಿ ಕಡಿತವಾಗುತ್ತದೆ. ಇದರಿಂದ ಸಮಯದ ಜತೆಗೆ ಹಣದ ಉಳಿತಾಯವೂ ಆಗಲಿದೆ” ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!