Wednesday, September 11, 2024

ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ? : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ. ಕೆ ಸುರೇಶ್‌ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಿಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ. ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ರಾಜ್ಯ ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿದರು. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನೀಡುತ್ತಿದ್ದೇವೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣಗಳಿಂದ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ? ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!