spot_img
Tuesday, March 31, 2026
spot_img

ಕೇಜ್ರಿವಾಲ್‌ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಕೊರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ಜನಪ್ರತಿನಿಧಿ (ನವದೆಹಲಿ) : ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು(ಗುರುವಾರ) ವಜಾಗೊಳಿಸಿ ಆದೇಶಿಸಿದೆ. ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳುವ ಮೂಲಕ ಈ ವಿಚಾರದ ಅರ್ಹತೆಗಳ ಬಗ್ಗೆ ಪ್ರತಿಕ್ರಿಯಿಸಲು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ನ್ಯಾಯಪೀಠ ನಿರಾಕರಿಸಿದೆ.

“ಕಾನೂನಿಗೆ ಅನುಸಾರವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಳಿಗೆ ಸೇರಿದ್ದು ಎಂದು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠ ಹೇಳಿದೆ. ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಮುಂದುವರಿಕೆಗೆ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಪರ ವಕೀಲರಿಗೆ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಹೇಳಿದೆ.

ಮಾರ್ಚ್ 21 ರಂದು ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ನಂತರ ದೆಹಲಿ ನ್ಯಾಯಾಲಯವು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!